ವಾಡಿ: ಸಮೀಪದ ರಾವೂರ ಹಾಗೂ ಚಿತ್ತಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಂಟಂ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಕೃಷಿ ಕಾರ್ಮಿಕ ಮಹಿಳೆ ಮೃತಪಟ್ಟು ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಚಿತ್ತಾಪುರ ತಾಲೂಕಿನ ಮೊಗಲಾತಾಂಡಾದ ನಿವಾಸಿ ಫುಲ್ಲಿಬಾಯಿ ಲಕ್ಷ್ಮಣ ರಾಠೋಡ (೩೪) ಮೃತ ಮಹಿಳೆಯಾಗಿದ್ದು, ಅದೇ ಗ್ರಾಮದ ಗಂಗಾಬಾಯಿ ಪ್ರಕಾಶ (೪೫), ತಾರಾಬಾಯಿ ವಿಠ್ಠಲ (೪೫), ಜಮಾನಬಾಯಿ (೧೮) ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೃಷಿ ಕೂಲಿ ಕೆಲಸಕ್ಕೆಂದು ಮೊಗಲಾ ತಾಂಡಾದಿಂದ ಟಂಟಂ ವಾಹನದಲ್ಲಿ ರಾವೂರ ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದ್ದು, ಕೆಲಸ ಮುಗಿಸಿಕೊಂಡು ಸಂಜೆ ವಾಪಸ್ ಮೊಗಲಾ ತಾಂಡಾಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಚಿತ್ತಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ಸಾರಿಗೆ ಬಸ್ ಹಾಗೂ ರಾವೂರ ದಿಂದ ಚಿತ್ತಾಪುರ ಮಾರ್ಗವಾಗಿ ಹೋಗುತ್ತಿದ್ದ ಟಂಟಂ ಮಧ್ಯೆ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಟಂಟಂ ವಾಹನ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಾಡಿ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಶಿವಕಾಂತ ಕಮಲಪೂರಕರ್ ಹಾಗೂ ಸಿಬ್ಬಂದಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…