ಕಾಳಗಿ: ೨೦ನೇ ಶತಮಾನ ಕಂಡ ದೈತ್ಯ ಪ್ರತಿಭೆ ರಾಷ್ಟ್ರಕವಿ ಕುವೆಂಪುರವರು ವರಕವಿ ಬೇಂದ್ರಯವರಿಂದ ‘ಯುಗಕವಿ ಜಗದಕವಿ’ ಎನಿಸಿಕೊಂಡು ವಿಶ್ವ ಮಾನವ ಸಂದೇಶ ಸಾರಿದ ಆದರ್ಶ ಪುರಿಷ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ. ಯಶವಂತರಾಯ ಅಷ್ಟಗಿ ವಿಶೇಷ ಹೇಳಿದರು.
ಕಾಳಗಿ ತಾಲ್ಲೂಕಿನ ಕೋರವಾರ ಅಣವೀರ ಭದ್ರೇಶ್ವರ ಆಂಗ್ಲ ಮಾದ್ಯಮ ಶಾಲೆಯಲ್ಲಿ ಕಾಳಗಿ ತಾಲ್ಲೂಕು ಕಸಾಪ ಹಮ್ಮಿಕೊಂಡಿರುವ ಜ್ಞಾನಪೀಠ ಗಾರುಡಿಗ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ನೀಡಿದರು. ‘ಶ್ರೀ ರಾಮಾಯಣ ದರ್ಶನಂ’ ಎಂಬ ಮಹಾಕಾವ್ಯವನ್ನು ಕೊಟ್ಟ ಕುವೆಂಪುರವರು ತಮ್ಮ ಇದೊಂದೇ ಕೃತಿಯಿಂದ ತನ್ನ ಶಕ್ತಿಯೇನು ಎಂಬುದನ್ನು ಜಗಜ್ಜಾಹೀರು ಮಾಡಿದ್ದಾರೆ. ’ನೂರು ದೇವರನೆಲ್ಲ ನೂಕಾಚೆ ದೂರ. ಭಾರತಾಂಬೆಯೇ ದೇವಿ ನಮಗಿಂದು ಪೂಜಿಸುವ ಬಾರ’ ಎನ್ನುತ್ತಾ ಕುರುಡು ಭಕ್ತಿಯನ್ನು ಕಿತ್ತೆಸೆದು, ದೇಶಭಕ್ತಿಯನ್ನು ಬಿತ್ತುವ ಪ್ರಯತ್ನ ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಳಗಿ ತಾಲೂಕಾ ಕಸಾಪ ಅಧ್ಯಕ್ಷ ಸಂತೋಷ ಕುಡಳ್ಳಿ ಮಾತನಾಡಿ, ಕುವೆಂಪು ಅವರು ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿ ಕನ್ನಡಿಗರ ಹ್ಲದಯ ಸಾಮ್ರಾಜ್ಯದ ಅಧಿಪತಿಯಾಗಿದ್ದಾರೆ ಎಂದು ಹೇಳಿದರು. ಬರುವ ದಿನಗಳಲ್ಲಿ ಕಾಳಗಿ ತಾಲೂಕಿನಲ್ಲಿ ಇಂತಹ ಹತ್ತು ಹಲವು ಉಪನ್ಯಾಸ ಕಾರ್ಯಕ್ರಮ ಹಾಗೂ ವಿಭನ್ನ, ವಿಶಿಷ್ಟ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶ್ರೀ ಅಣಿವೀರಭದ್ರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ಧನಂಜಯ ಸ್ವಾಮಿಗಳು ಆಶೀರ್ವಚನ ನೀಡಿದರು. ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ್ ಕಾಳಗಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಅನೀಲ್ ಜೋಶಿ, ಮಾಡಬೂಳ ಎಎಸ್‌ಐ ಭೀಮಶಂಕರ ದೊಡ್ಮನಿ, ಗ್ರಾಪಂ ಸದಸ್ಯೆ ಬಸವರಾಜ ಕಂಠಿ, ಕಾಳಗಿ ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ಗದ್ದಿ, ಮಾರುತಿ ಪೂಜಾರಿ ಮಾತನಾಡಿದರು.
ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಕಾಂತ ಕದಂ, ರವಿ ದಂಡಿನ, ಶಿವರಾಜ ಚೇಂಗಟಿ, ಭೀಮು ಗುತ್ತೇದಾರ, ಮುಖ್ಯೋಪಾಧ್ಯಾಯ ಬಾಬುರಾವ ಪೂಜಾರಿ ಇತರರು ಇದ್ದರು.
ಶರಣಮ್ಮ ಪ್ರಾರ್ಥಿಸಿದರು. ಬಸವಶ್ರೀ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗೇಂದ್ರ ಮೊಘಾ ಸ್ವಾಗತಿಸಿದರು. ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಚನ್ನವೀರ ಕಪನೂರ ನಿರುಪಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…