ಕಲಬುರಗಿ: ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಂವಿಧಾನದ ಆಶಯವಾಗಿದ್ದು, ಅದನ್ನು ಕಾರ್ಯರೂಪದಲ್ಲಿ ತರಲು ಸರ್ಕಾರವು ಎಲ್ಲೆಡೆ ಶಾಲೆಗಳನ್ನು ತೆರೆಯುವುದು, ಉಚಿತವಾಗಿ ಬಟ್ಟೆ, ಪುಸ್ತಕ, ಸೈಕಲ್, ಊಟ, ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗಪಡಿಸಿಕೊಂಡು ಸರಿಯಾಗಿ ಅಧ್ಯಯನ ಮಾಡಿ, ಉನ್ನತವಾದ ಸಾಧನೆಯನ್ನು ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಲೂಕಿನ ಯಳವಂತಗಿ(ಕೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಜರುಗಿದ ’ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ’ಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಗುವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬುದ್ದಿ, ಕೌಶಲ್ಯಗಳನ್ನು ಕಲಿಯಬೇಕು. ಬಾಲ್ಯದಿಂದಲೇ ಕೆಟ್ಟ ಚಟಗಳಿಂದ ದೂರವಿರಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ಪಾಲಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸಿಕೊಡಬೇಕು. ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸಮುದಾಯ ಭಾಗವಹಿಸುವದರಿಂದ ಕಲಿಕೆ-ಬೋಧನೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಪರಮೇಶ್ವರ ಬಿ.ದೇಸಾಯಿ, ದೇವೇಂದ್ರಪ್ಪ ಗಣಮುಖಿ, ಭೀಮಾಶಂಕರ ಸಂಗೋಳಗಿ, ಶಿವಪುತ್ರಪ್ಪ ಹಿರೇಗೌಡ, ಶಿವಲಿಂಗಪ್ಪ ನಾಯ್ಕೋಡಿ, ಶಿವಯೋಗಪ್ಪ ಜೀವಣಗಿ, ಶಿವಪುತ್ರ ಮೇಳಕುಂದಿ, ಚಂದ್ರಶೇಖರ ತಾಕಲೂರೆ, ಈರಮ್ಮ ತಾವರಗೇರಾ, ಪುಷ್ಪಾ ಮ್ಯಾಳೇಸಿ, ಸುಮಿತ್ರಾ ಕುಂಬಾರ, ಸೂರ್ಯಕಾಂತ ನಿಂಬರ್ಗಾ, ಪರಮೇಶ್ವರ ಮಾನೆ, ಅಂಬಾರಾಯ ಕಣ್ಣೂರ್, ಅಂಬಾರಾಯ ಮೇಳಕುಂದಿ, ಲಕ್ಕಣ್ಣ ಕಟ್ಟಿಮನಿ, ಭೀಮಾಶಂಕರ ಜಗತ್ತಿ, ಸುರೇಶ ಜೀವಣಗಿ, ಲಿಂಗಮ್ಮ ದೊಡ್ಡಮನಿ, ಸಿದ್ದಮ್ಮ ಕಡಗಂಚಿ, ಚಂದಮ್ಮ ಮಾನೆ, ಹಣಮಂತ, ನಾಮದೇವ,ಮಲ್ಲೇಶಪ್ಪ, ಶರಣಪ್ಪ, ಬಬ್ರುವಾಹನ್, ನೀಲಕಂಠ, ಪಾಂಡುರಂಗ, ಪೀರಪ್ಪ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…