ಬಿಸಿ ಬಿಸಿ ಸುದ್ದಿ

ದೇಶ ಪ್ರೇಮ ಸಾರುವ ಶಿಬಿರಗಳು ನಡೆಯಲಿ: ಡಾ. ಎಂ.ಎಸ್. ಪಾಸೋಡಿ

ಕಲಬುರಗಿ: ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಸಮಾಜಮುಖಿ ಕೆಲಸಗಳು ಮತ್ತು ಪ್ರತಿಯೊಬ್ಬರಲ್ಲಿ ದೇಶ ಪ್ರೇಮ ಸಾರುವ ಶಿಬಿರ ಬಹಳ ಮಹತ್ವವನ್ನು ಪಡೆದಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಂ. ಎಸ್. ಪಾಸೋಡಿ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದ ದೈಹಿಕ ಶಿಕ್ಷಣ ವಿಭಾಗದಲ್ಲಿ ಮೂರು ದಿನಗಳ ಕಾಲ ರಾಯಚೂರು, ಯಾದಗಿರಿ, ಕಲಬುರ್ಗಿಯ ಹೈಸ್ಕೂಲ್, ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ ಕರ್ನಾಟಕ ಜಿಲ್ಲಾ ಸಂಸ್ಥೆ ಕಲಬುರ್ಗಿಯ ರಾಜ್ಯ ಪುರಸ್ಕಾರ ಪರೀಕ್ಷೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಂದು ಶಾಲೆ ಕಾಲೇಜುಗಳಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಘಟಕಗಳನ್ನು ಪ್ರಾರಂಭಿಸಿ ಅದರ ಉಪಯೋಗದ ಬಗ್ಗೆ ಪ್ರತಿ ವಿದ್ಯಾರ್ಥಿಗಳಿಗೆ ತಿಳಿ ಹೇಳಬೇಕು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಸ್ಕೌಟ್ಸ್‌ ಮತ್ತು ಗೈಡ್ಸ್‌ ಘಟಕಗಳನ್ನು ನೀಡುವ ಮೂಲಕ ಅದರ ಅನೇಕ ಅನುಕೂಲಗಳನ್ನು ಪಡೆಯುವದರಿಂದ ಶಿಕ್ಷಕರು ಮತ್ತು ಮಕ್ಕಳು ಮುಕ್ತವಾಗಿ ಭಾಗವಹಿಸಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಅನುಕೂಲ ಪಡೆಯುವ ಜತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಅವರು ತಿಳಿಸಿದರು. ಎಸ್. ಪಿ. ಸುಳ್ಳದ್, ಎಸ್ ಎಸ್ ಮಂಠಾಳೆ ಸುಲೋಚನಾ ಬೆಂಜಿಮನ್, ಅಮರೇಶ ಕೋರಿ, ಅಯ್ಯಪ್ಪ ಅಂಬರಖೇಡ್, ಸಿದ್ರಾಮ ರಾಜಮಾನೆ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ ಶಿಬಿರಾರ್ಥಿಗಳು ಇದ್ದರು.

ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ: ಜಾತಿ, ಧರ್ಮ, ಪ್ರದೇಶ ಮತ ಅಥವಾ ಭಾಷೆಯ ಭೇದಭಾವವಿಲ್ಲದೆ ಭಾರತದ ಎಲ್ಲಾ ಜನತೆಯ ಭಾವ್ಯಕ್ಯೆ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೆ ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲಿ ನಿಮ್ಮಲ್ಲಿರುವ ಎಲ್ಲಾ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago