ಸುರಪುರ: ನಗರದ ಆರಾಧ್ಯ ದೈವ ಶ್ರೀ ವೇಣುಗೋಪಾಲಸ್ವಾಮಿ ಹಾಲೋಕಳಿ ಜಾತ್ರೆ ಅದ್ಧೂರಿಯಾಗಿ ನೆರವೇರಿತು.ಕಳೆದ ಎರಡು ವರ್ಷಗಳಿಂದ ಕೊರೊನಾ ಹಾವಳಿಯಿಂದ ಸರಳವಾಗಿ ಜಾತ್ರೆ ಆಚರಿಸಲಾಗಿತ್ತು.ಈ ವರ್ಷ ಅದ್ಧೂರಿಯಾಗಿ ನಡೆಸಲಾಯಿತು.
ಭಾನುವಾರ ಬೆಳಿಗ್ಗೆ ಶ್ರೀ ವೇಣುಗೋಪಾಲಸ್ವಾಮಿಗೆ ಪೂಜೆ ಕೈಂಕಂii ನೆರವೇರಿಸಲಾಯಿತು.ನಂತರ ಸಂಜೆ ವೇಳೆಗೆ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಅವರು ಐತಿಹಾಸಿಕ ರಾಜ ಪೋಷಾಕು ಧರಿಸಿ ರತ್ನ ಖಚಿತ ಕಿರಿಟವನ್ನು ಧರಿಸಿ ಸವಾರಿ ಹೊರಟು ದೇವರ ದರ್ಶನವನ್ನು ಪಡೆದರು,ನಂತರ ಸಂಜೆ ದೇವರ ಸ್ಥಂಬಾರೋಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲಾಯಿತು.ನಗರದ ೧೬ ಕೇರಿಯ ವತನದಾರರು ಹಾಗೂ ಸಾವಿರಾರು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡು ಸ್ಥಂಬೋತ್ಸವವನ್ನು ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಅನೇಕ ಮುಖಂಡರು ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.