ಕಲಬುರಗಿ : ಅಗಸ್ಟ್ ೨೬ ರಂದು ತಾಲೂಕಿನ ಸುಕ್ಷೇತ್ರ ಶ್ರೀ ನಿವಾಸ ಸರಡಗಿ ಮಹಾಲಕ್ಷ್ಮೀ ಶಕ್ತಿ ಪೀಠದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಕೊನೆಯ ೫ನೇ ಶುಕ್ರವಾರ ರಂದು ಬೆಳಿಗ್ಗೆ ೮ ಗಂಟೆಗೆ ಶ್ರೀದೇವಿಗೆ ಮಹಾಭಿಷೇಕ, ಮಹಾಅಂಕಾರ, ಮಹಾ ನೈವಿದ್ಯ, ಕುಂಕುಮಾರ್ಚನೆ, ಪಲ್ಲಕ್ಕಿ ಉತ್ಸವ ಹಾಗೂ ಹೋಮ ನಂತರ ಸದ್ಧರ್ಮ ಶಿರೋಮಣಿ ಶಕ್ತಿ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಅಪ್ಪಾರಾವ ದೇವಿ ಮುತ್ಯಾ ಅವರಿಗೆ ಸೂವರ್ಣ ಕಿರೀಟ ಧಾರಣೆ ಹಾಗೂ ಗುರುವಂದನ ಕಾರ್ಯಕ್ರಮ ಜರುಗಲಿದೆ. ನಂತರ ಮಹಾಪ್ರಸಾದ ಸಂಗೀತ ಕಾರ್ಯಕ್ರಮ ಹಾಗೂ ಅನೇಕ ರಾಜಕೀಯ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.