ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸರ್ಕಾರಿ ಆರ್.ಸಿ. ಕಾಲೇಜು, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಕೆ.ಜಿ.ರಸ್ತೆ, ಬೆಂಗಳೂರು-09, ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಗಸ್ಟ್ 26ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಸರ್ಕಾರಿ ಆರ್.ಸಿ. ಕಾಲೇಜು, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು – 560001 ಇಲ್ಲಿ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣ, ಪಿ.ಯು.ಸಿ., ಐ.ಟಿ.ಐ (ಎಲ್ಲಾ ಟ್ರೇಡ್‍ಗಳು), ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು. ತಮ್ಮ ವೈಯುಕ್ತಿಕ ವಿವರಗಳುಳ್ಳ (ಬಯೋಡಟಾ) ಹಲವು ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986299159, 9964907444, 9448061225 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ, ಕೌಶಲ್ಯ ಕರ್ನಾಟಕ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ರೋಟರಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಪ್ರಗತಿ ಪಥ – 2022 ಬೃಹತ್ ಉದ್ಯೋಗ ಮೇಳವನ್ನು ಆಗಸ್ಟ್ 26ರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಸರ್ಕಾರಿ ರಾಮನಾರಾಯಣ್ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಮಹಾವಿದ್ಯಾಲಯ, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು – 560001 ಇಲ್ಲಿ ಆಯೋಜಿಸಲಾಗಿದೆ.