ಬಿಸಿ ಬಿಸಿ ಸುದ್ದಿ

ಆಗಸ್ಟ್ 26 ರಂದು ಬೃಹತ್ ಉದ್ಯೋಗ ಮೇಳ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸರ್ಕಾರಿ ಆರ್.ಸಿ. ಕಾಲೇಜು, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು ಹಾಗೂ  ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಕೆ.ಜಿ.ರಸ್ತೆ, ಬೆಂಗಳೂರು-09, ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಗಸ್ಟ್ 26ರ ಬೆಳಿಗ್ಗೆ 9.30 ರಿಂದ  ಸಂಜೆ 4 ಗಂಟೆಯವರೆಗೆ ಸರ್ಕಾರಿ ಆರ್.ಸಿ. ಕಾಲೇಜು, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು – 560001 ಇಲ್ಲಿ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣ, ಪಿ.ಯು.ಸಿ., ಐ.ಟಿ.ಐ (ಎಲ್ಲಾ ಟ್ರೇಡ್‍ಗಳು), ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು. ತಮ್ಮ ವೈಯುಕ್ತಿಕ ವಿವರಗಳುಳ್ಳ (ಬಯೋಡಟಾ) ಹಲವು ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986299159, 9964907444, 9448061225 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ, ಕೌಶಲ್ಯ ಕರ್ನಾಟಕ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ರೋಟರಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಪ್ರಗತಿ ಪಥ – 2022 ಬೃಹತ್ ಉದ್ಯೋಗ ಮೇಳವನ್ನು ಆಗಸ್ಟ್ 26ರ ಬೆಳಿಗ್ಗೆ 9.30 ರಿಂದ  ಸಂಜೆ 5 ಗಂಟೆಯವರೆಗೆ ಸರ್ಕಾರಿ ರಾಮನಾರಾಯಣ್ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಮಹಾವಿದ್ಯಾಲಯ, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು – 560001 ಇಲ್ಲಿ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಸಾಮಾನ್ಯ ಪದವೀಧರರು, ಇಂಜಿನಿಯರಿಂಗ್ ಪದವೀಧರರು, ಡಿಪ್ಲೊಮಾ, ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಅಥವಾ ಅಂತಿಮ ಸೆಮಿಸ್ಟರ್‍ನಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ತಮ್ಮ ವೈಯುಕ್ತಿಕ ವಿವರಗಳುಳ್ಳ (ಬಯೋಡಟಾ) ಹಲವು ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964366993, 9632502552, 9448061225 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago