ಕಲಬುರಗಿ: ಭಾರತೀಯ ಸಂಸ್ಕೃತಿಯಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸ್ಥಾನವಿದೆ. ಕನ್ನಡ ಭಾಷೆಯು ಸಾಮಾನ್ಯವಾದುದಲ್ಲ. ಅದು ಸಮೃದ್ಧವಾದ ಹೃದಯ ಶ್ರೀಮಂತಿಕೆಯಿಂದ ಕೂಡಿದ ಭಾಷೆಯಾಗಿದೆ ಎಂದು ಹಾಸ್ಯ ಕಲಾವಿದ-ಹಿರಿಯ ಸಾಹಿತಿ ಡಾ.ವೈ.ವಿ.ಗುಂಡೂರಾವ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಶ್ರೀ ಬಾಪೂಗೌಡ ದರ್ಶನಾಪೂರ ರಂಗಮಂದಿರದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ ‘ಹಾಸ್ಯೋಪನ್ಯಾಸ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆದಿಕವಿ ಪಂಪ, ಕುವೆಂಪು, ದ.ರಾ.ಬೇಂದ್ರೆ ಸೇರಿದಂತೆ ಅನೇಕ ದಾರ್ಶನಿಕರು ನಮ್ಮ ಕರ್ನಾಟಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಮಾಮಿಕವಾಗಿ ಹೇಳಿದ ಅವರು, ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು-ನುಡಿ ಕುರಿತಾದ ನಿತ್ಯ ನಿರಂತರವಾಗಿ ಕಾರ್ಯಕ್ರಮಗಳನ್ನು ಅಯೋಜಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಪಕ್ಷ, ಜಾತಿ, ಧರ್ಮ, ಬೇಧ ಬೆರೆತು ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯ ಕನ್ನಡ ಭಾಷೆಗಿದೆ. ಕನ್ನಡ ನಾಡು-ನುಡಿ, ನೆಲ-ಜಲ ಇವುಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲಾ ವರ್ಗದ ಜನರನ್ನು ಒಂದುಗೂಡಿಸುವ ಮತ್ತು ಒಗ್ಗೂಡಿಸುವ ಕಾರ್ಯ ನಿರಂತರವಾಗಿ ಮಾಡುತ್ತಿದೆ ಎಂದರು.
ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಎಸ್.ಅಂಡಗಿ, ಶರಣರಾಜ್ ಛಪ್ಪರಬಂದಿ, ಸಿ.ಎಸ್.ಆನಂದ, ರಾಜೇಂದ್ರ ಮಾಡಬೂಳ, ನಾಗೇಂದ್ರಪ್ಪ ಮಾಡ್ಯಾಳೆ, ಜ್ಯೂ ಡಾ.ಜ್ಯೂ.ಡಾ.ರಾಜಕುಮಾರ ಖ್ಯಾತಿಯ ಶಂಭುಲಿಂಗ ಬುಳ್ಳಾ, ಸಾಹಿತಿ ಧರ್ಮಣ್ಣಾ ಹೆಚ್.ಧನ್ನಿ, ಕುಡಾ ಮಾಜಿ ಅಧ್ಯಕ್ಷ ಶಾಮರಾವ ಪ್ಯಾಟಿ, ಪ್ರಮುಖರಾದ ಮಲ್ಲಿನಾಥ ಪಾಟೀಲ ಕಾಳಗಿ, ಮಂಜುಳಾ ಸುತಾರ, ಶಿವಶರಣ ಹಡಪದ, ಎಸ್.ಎಂ.ಪಟ್ಟಣಕರ್, ಶಿವಕುಮಾರ ಸಿ.ಎಚ್., ಹೆಚ್.ಎಸ್.ಬರಗಾಲಿ, ರವಿಕುಮಾರ ಶಹಾಪುರಕರ್, ಎಂ.ಎನ್.ಸುಗಂಧಿ, ಸಂತೋಷ ಕುಂಬಾರ, ಸಂಗನಬಸವ ಪಾಟೀಲ ದಿಕ್ಸಂಗಿ ಸೇರಿದಂತೆ ಅನೆಕರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…