ನಗರದಲ್ಲಿ ಗಣೇಶ ಹಬ್ಬದ ನಿಮಿತ್ತ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ಒತ್ತಾಯಪೂರ್ವಕವಾಗಿ ಯುವಕರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಒಂದು ವೇಳೆ ವಸೂಲಿ ಮಾಡುತ್ತಿರುವುದು, ವಾಹನಗಳನ್ನು ನಿಲ್ಲಿಸುವುದು ಕಂಡು ಬಂದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು.ಇದೊಂದು ಉತ್ತಮ ಸಂಸ್ಕೃತಿಯಲ್ಲ. ಅಲ್ಲದೇ ಸಮಾಜದ ಮುಖಂಡರು, ಪಾಲಕರು ಈ ಬಗ್ಗೆ ಗಮನಹರಿಸಿ ತಿಳುವಳಿಕೆ ನೀಡಬೇಕು- ರಾಘವೇಂದ್ರ ಪಿಐ
ಶಹಾಬಾದ: ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ಗುರುವಾರ ಸಾಯಂಕಾಲ ಪೊಲೀಸ್ ಆರಕ್ಷಕ ನಿರೀಕ್ಷಕ ರಾಘವೇಂದ್ರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪಿಐ ರಾಘವೇಂದ್ರ, ಹಬ್ಬಗಳ ಆಚರಣೆ ಸಮಾಜದ ಎಲ್ಲರಲ್ಲೂ ಸಾಮರಸ್ಯ ಮೂಡಿಸಬೇಕು.ಒಬ್ಬರಿಗೊಬ್ಬರಿಗೂ ಸಹಕಾರಯುತವಾಗಿ ನಡೆದುಕೊಂಡು ಆಚರಿಸಬೇಕು. ಎಂದರಲ್ಲದೇ, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದರೀತಿ ಹಬ್ಬದ ಆಚರಣೆ ಶಾಂತರೀತಿಯಲ್ಲಿ ನಡೆಸಿಕೊಂಡು ಹೋಗುವಂತೆ ತಿಳಿಸಿದರು.
ಗಣೇಶ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ದೇವರಲ್ಲ. ಎಲ್ಲಾ ಭಕ್ತರ ಸಂಕಷ್ಟಗಳನ್ನು ಪರಿಹರಿಸುವ ಆರಾಧ್ಯ ದೈವ.ಆದ್ದರಿಂದ ಗಣೇಶೋತ್ಸವ ಸುಗಮವಾಗಿ ನಡೆಯಬೇಕೆಂಬುದು ಪೊಲೀಸ್ ಇಲಾಖೆಯ ಅಪೇಕ್ಷೆ. ಹಾಗಾಗಿ ಸಾರ್ವಜನಿಕರ ಹಿತ ಕಾಪಾಡುವ ದೃಷ್ಟಿಯಿಂದ ಇಲಾಖೆ ಈ ಬಾರಿ ಹಲವಾರು ಮಾರ್ಗಸೂಚಿಗಳನ್ನು ಅಳವಡಿಸಿದೆ. ಗಣೇಶ ಕೂಡಿಸುವ ಸ್ಥಳದಲ್ಲಿ ಪೆಂಡಾಲ ನಿರ್ಮಾಣಕ್ಕೂ ಮುನ್ನ ಅನುಮತಿ ಪಡೆಯಬೇಕು.
ಅಲ್ಲದೇ ಸರಕಾರದ ಆದೇಶದಂತೆ ಡಿಜೆ ಧ್ವನಿವರ್ಧಕ ಯಾವುದೇ ಕಾರಣಕ್ಕೂ ಬಳಸುವಂತಿಲ್ಲ. ಬಳಸಿದರೆ ಕಠಿಣ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಆದೇಶದಲ್ಲಿ ಬದಲಾವಣೆಯಾದರೆ ತಮ್ಮ ಗಮನಕ್ಕೆ ತರಲಾಗುವುದೆಂದು ಹೇಳಿದರು.
ಪಿಎಸ್‌ಐ ಅಶೋಕ ಪಾಟೀಲ, ಗಣೇಶ ವಿಗ್ರಹ ವಿಸರ್ಜನೆ ವೇಳೆ ಬಾವಿ, ನದಿ ಹಾಗೂ ನೀರಿರುವ ಸ್ಥಳಗಳಲ್ಲಿ ಈಜು ಬಾರದವರನ್ನು ಬಿಡದಂತೆ ಎಚ್ಚರ ವಹಿಸಬೇಕು. ಅಲ್ಲದೇ ಯಾವುದೇ ರೀತಿಯ ಸಮಸ್ಯೆ ಇದ್ದರೂ ಅದನ್ನು ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತಂದು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು.
ನಗರಸಭೆಯ ಪೌರಾಯುಕ್ತ ಅಶೋಕ ಬಿಲಗುಂದಿ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಕದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಮಾತನಾಡಿದರು.
ನಗರದ ಗಣ್ಯರಾದ ಶಿವಕುಮಾರ ಇಂಗಿನಶೆಟ್ಟಿ, ಅರುಣ ಪಟ್ಟಣಕರ್, ನಿಂಗಣ್ಣ ಹುಳಗೋಳಕರ್,ನಾಗರಾಜ ಮೇಲಗಿರಿ, ವಿಶ್ವಹಿಂದು ಪರಿಷತ್ ಅಧ್ಯಕ್ಷ ಬಸವರಾಜ ಸಾತ್ಯಾಳ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ,ಅನೀಲ ಹಿಬಾರೆ,ಸದಾನಂದ ಕುಂಬಾರ,ರಾಜ ಮಹ್ಮದ್ ರಾಜಾ, ಲಿಂಗರಾಜ ಮಲಕೂಡ, ಜಗದೇವ ಸುಬೇದಾರ,ಮಹಾದೇವ ತರನಳ್ಳಿ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…