ಬಿಸಿ ಬಿಸಿ ಸುದ್ದಿ

ತಾಲೂಕ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ ೨ ರಂದು

ಶಹಾಬಾದ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಲ್ಬುರ್ಗಿ ವತಿಯಿಂದ ೨೦೨೨-೨೩ ನೇ ಸಾಲಿನ ಶಹಾಬಾದ ತಾಲೂಕ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ ೨ ಮತ್ತು ೩ ರಂದು ನಗರದ ಬಿವ್ಹಿಎಂ ಶಾಲಾ ಮೈದಾನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಯೋಜಕ ಮರೆಪ್ಪ ಬೊಮ್ಮನಳ್ಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ ೨ ರಂದು ಗುಂಪು ಆಟಗಳಾದ ಕಬ್ಬಡ್ಡಿ, ಖೋಖೋ, ವಾಲಿಬಾಲ್,ಥ್ರೋಬಾಲ್, ಫುಟ್ಬಾಲ್ ಹಾಗೂ ಸೆಪ್ಟೆಂಬರ್ ೩ ರಂದು ವೈಯಕ್ತಿಕ ಸ್ಪರ್ಧೆಗಳಾದ ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪ್ಪಲ್ ಜಂಪ್, ಗುಂಡು ಎಸೆತ, ಚಕ್ರ ಎಸೆತ, ಜಾವಲಿನ್ ಎಸೆತ, ರಿಲೇ ಹಾಗೂಓಟದ ಸ್ಪರ್ಧೆ ನಡೆಯಲಿದೆ.

ಈ ಒಂದು ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಾಲೂಕು ವ್ಯಾಪ್ತಿಗೆ ಒಳಪಟ್ಟಿರಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ ಕಡ್ಡಾಯವಾಗಿ ತರಬೇಕು. ಭಾಗವಹಿಸುವವರು ಆಗಸ್ಟ್ ೩೦ರ ಒಳಗಾಗಿ ತಮ್ಮ ತಂಡದ ಪಟ್ಟಿ ಮಾಡಿ ಸಂಘಟನೆಗೆ ನೀಡಬೇಕು. ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಮಹಿಳೆಯರು ಹಾಗೂ ಪುರು?ರು ಭಾಗವಹಿಸಬಹುದು.ವಯಸ್ಸಿನ ಮಿತಿ ಇರುವುದಿಲ್ಲ.ಅಲ್ಲದೇ ದಿನಭತ್ಯೆ ಹಾಗೂ ಪ್ರಯಾಣ ಭತ್ಯೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮರೆಪ್ಪ ಬೊಮ್ಮನಳ್ಳಿಕರ್ ೯೯೪೫೨೩ ೦೧೬೦ ದೈಹಿಕ ಶಿಕ್ಷಣ ಶಿಕ್ಷಕರಾದ ಬನ್ನಪ್ಪ ಸೈದಾಪುರ್ ೯೪೪ ೯೧೨೪೦ ೯೩ ಸಂಪರ್ಕಿಸಲು ತಿಳಿಸಿದ್ದಾರೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago