ಬಿಸಿ ಬಿಸಿ ಸುದ್ದಿ

M.H.R.D ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ (M.H.R.D), ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರು, 2022ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಅಗ್ರ 20 ಶ್ರೇಣಿಯ ಅಥವಾ ಶೇ. 80% ಗಿಂತ ಹೆಚ್ಚು ಅಂಕಗಳಿಸಿ ತೇರ್ಗಡೆ ಹೊಂದಿದ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರಿಸಿರುವಂತಹ (ಕನಿಷ್ಠ 03 ವರ್ಷದ ಪದವಿ ತರಗತಿಗೆ ದಾಖಲಾಗಿರುವ) ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಕೇಂದ್ರ ವಲಯದ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ವೆಬ್‍ಸೈಟ್  www.scholarships.gov.in ನ  National e-Scholarship Portal ನಲ್ಲಿ ಹೊಸ ತಂತ್ರಾಂಶ ಅಳವಡಿಸಲಾಗಿದ್ದು, ಈ ಪೋರ್ಟಲ್‍ನಲ್ಲಿಯೇ 2022ರ Fresh Batch ನ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು. (Link for submission of application website:www.scholarship.gov.in =» New User(Register). ಪ್ರಸ್ತುತ ಪೋರ್ಟಲ್‍ನಲ್ಲಿ ಹೊಸ ಬ್ಯಾಚ್‍ನ ಕಾರ್ಯ ಚಾಲ್ತಿಯಲ್ಲಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಪೋರ್ಟಲ್‍ನಲ್ಲಿ ಲಭ್ಯವಿರುವ ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಓದಿ ಅರ್ಥೈಸಿಕೊಂಡು ನಿಗದಿ ಪಡಿಸಿರುವ ಸೆಪ್ಟೆಂಬರ್ 10, 2022ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

2022ನೇ ಸಾಲಿನಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ (ಹೊಸ ಹಾಗೂ ನವೀಕರಣಗಳಿಗೆ) ಅರ್ಜಿ ಸಲ್ಲಿಸಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಿರುತ್ತದೆ. ಆದಕಾರಣ, ಆಸಕ್ತ ವಿದ್ಯಾರ್ಥಿಗಳು ಆಧಾರ್ ನೊಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ತಾವು ಅಧ್ಯಯನ ಮಾಡುತ್ತಿರುವ ಕಾಲೇಜುಗಳ ಪ್ರಾಚಾರ್ಯರುಗಳಿಗೆ ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ದಿನಾಂಕದೊಳಗಾಗಿ ಸಲ್ಲಿಸುವುದು.

ಪ್ರಾಚಾರ್ಯರುಗಳು, ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಕೂಲಂಕುಷವಾಗಿ ಪರಿಶೀಲಿಸಿ, ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ, ವಿದ್ಯಾಭ್ಯಾಸ ಮುಂದುವರಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ವಿದ್ಯಾರ್ಥಿ ವೇತನದ ಉದ್ದೇಶಕ್ಕಾಗಿ ಖಾತೆ ತೆರೆದಿರುವ ಬ್ಯಾಂಕ್‍ನ ವಿವರಗಳನ್ನು ಪರಿಶೀಲಿಸಿ, ಮಾಹಿತಿಯನ್ನು ಆನ್‍ಲೈನ್ ಮೂಲಕವೇ ಕೇಂದ್ರ ಸರ್ಕಾರದ ವತಿಯಿಂದ ನಿಗದಿ ಪಡಿಸಿರುವ ನವೆಂಬರ್ 30, 2022 ರೊಳಗೆ ಇಲಾಖೆಗೆ ಸಲ್ಲಿಸಬೇಕು.  ನೈಜ ವಿದ್ಯಾರ್ಥಿಯ ಹೊರತು ಆಯ್ಕೆಯಾಗದ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಜಮೆಯಾಗದಂತೆ ನೋಡಿಕೊಳ್ಳುವುದು ಪ್ರಾಚಾರ್ಯರ ಜವಾಬ್ದಾರಿಯಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಕೇಂದ್ರ ಕಛೇರಿಯ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನದ ಶಾಖೆಯನ್ನು ಸಂಪರ್ಕಿಸಬಹುದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‍ಸೈಟ್ : http://pue.karnataka.gov.in =» Scholarship =» MHRD Scholarship =» MHRD Scholarship 2022-Fresh batch ನಿಂದ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವೇತನ ನವೀಕರಣಕ್ಕಾಗಿ ಅರ್ಜಿ

2018, 2019, 2020 ಹಾಗೂ 2021ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ “Direct Benefit Transfer (DBT) Programme”ನ ಅಡಿಯಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಅವರ 1ನೇ, 2ನೇ, 3ನೇ ಹಾಗೂ 4ನೇ ನವೀಕರಣಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಕೇಂದ್ರ ಸರ್ಕಾರದ ವತಿಯಿಂದ ವೆಬ್‍ಸೈಟ್  www.scholarships.gov.ನ National e-Scholarship Portal  ನಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸಲಾಗಿದ್ದು, 2022ನೇ ಸಾಲಿನಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ನವೀಕರಣಗಳ ನಿಮಿತ್ತ ಈ ಪೋರ್ಟಲ್‍ನಲ್ಲಿಯೇ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿರುತ್ತದೆ. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸೆಪ್ಟೆಂಬರ್ 31, 2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಇಲಾಖಾ ವೆಬ್‍ಸೈಟ್‍ನಲ್ಲಿಯೂ ಕೂಡ 2018, 2019, 2020 ಹಾಗೂ 2021ನೇ ಸಾಲಿನಲ್ಲಿ ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ನವೀಕರಣಗಳಿಗೆ ಅರ್ಜಿ ಸಲ್ಲಿಸುವ ಕುರಿತು ಸುತ್ತೋಲೆಯನ್ನು ಅಳವಡಿಸಲಾಗಿದೆ.

ವೆಬ್‍ಸೈಟ್ : http://pue.karnataka.gov.in =>Scholarship=>MHRD Scholarship=> MHRD Scholarship RENEWAL. ವಿದ್ಯಾರ್ಥಿಗಳು ಈ ವೆಬ್‍ಸೈಟನ್ನು ಸಂಪರ್ಕಿಸಿ ತಮಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆದು ಸೆಪ್ಟೆಂಬರ್ 31, 2022ರೊಳಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಪ್ರಥಮ ನವೀಕರಣ ಹಾಗೂ ಇನ್ನುಳಿದ ಮುಂದಿನ ನವೀಕರಣಗಳಿಗೆ ಆಧಾರ್ ಸಂಖ್ಯೆಯನ್ನು ಪಡೆದು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವುದು. ಪ್ರಾಚಾರ್ಯರುಗಳು / ಸಂಸ್ಥೆಯವರು ಅರ್ಹ ವಿದ್ಯಾರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸುವ / ತಿರಸ್ಕರಿಸುವ ಕಾರ್ಯವನ್ನು ತಮ್ಮ ಹಂತದಲ್ಲಿಯೇ ನಿರ್ವಹಿಸಬೇಕಾಗುತ್ತದೆ ಎಂದು ಅಧಿಕೃತ ಪ್ರಕಟಣೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago