ಹೈದರಾಬಾದ್ ಕರ್ನಾಟಕ

ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರತರಲು ವಿಜ್ಞಾನ ಪ್ರದರ್ಶನಗಳು ನೆರವಾಗಬಲ್ಲವು: ವೆಂಕಟರೆಡ್ಡಿ

ಶಹಾಬಾದ: ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರತರಲು ಹಾಗೂ ಅವರ ಜ್ಞಾನದ ಬೆಳೆವಣಿಗೆಗೆ ವಿಜ್ಞಾನ ಪ್ರದರ್ಶನಗಳು ನೆರವಾಗಬಲ್ಲವು ಎಂದು ಕಾಳಗಿ ವಲಯದ ಶಿಕ್ಷಣ ಸಂಯೋಜಕ ವೆಂಕಟರೆಡ್ಡಿ ಹೇಳಿದರು.

ಅವರು ನಗರದ ಮಿನಿರೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಪ್ರದರ್ಶನವನ್ನು ಮುಖ್ಯ ನಿರ್ಣಾಯಕರಾಗಿ ಆಗಮಿಸಿ ಮಾತನಾಡಿದರು.

ಶಾಲೆಗಳಲ್ಲಿ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಿದರೆ, ಮಕ್ಕಳ ಪ್ರತಿಭೆಯ ತಕ್ಕಂತೆ ಅವರು ತಾಲೂಕಾ, ರಾಜ್ಯ , ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ದೇಶಕ್ಕೆ ಕೀರ್ತಿ ತರುತ್ತಾರೆ. ಆದ್ದರಿಂದ ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲು ಶಿಕ್ಷಕರು ಮುಂದಾಗಬೇಕು ಎಂದು ತಿಳಿಸಿದರಲ್ಲದೇ, ಮಕ್ಕಳಿಗೆ ಅನ್ವೇ?ಣೆ, ಸಂಶೋಧನೆ ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನ ತುಂಬಾ ಅನುಕೂಲವಾಗಿವೆ. ಇದರಿಂದ ಮಕ್ಕಳಿಗೆ ವೈಜ್ಞಾನಿಕ ವಿಚಾರ ಬೆಳೆಸಲು ವಿಜ್ಞಾನ ಮಹತ್ವ ಮಕ್ಕಳಿಗೆ ತಿಳಿದುಕೊಳ್ಳಲು ನೆರವಾಗುತ್ತದೆ ಎಂದರು.

ಶಹಾಬಾದ ವಲಯದ ಶಿಕ್ಷಣ ಸಂಯೋಜಕ ಶ್ರೀಧರ ರಾಠೋಡ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲು ಹಾಗೂ ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ವಿಜ್ಞಾನ ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಿನಿರೋಸ್ ಶಾಲೆಯ ಅಧ್ಯಕ್ಷರಾದ ಶಬ್ಬೀರ್ ಅಹ್ಮದ್,ಮುಖ್ಯ ಶಿಕ್ಷಕರಾದ ಪರಶುರಾಮ ಶಿಕ್ಷಕರಾದ ಮುತ್ತಗಿಕರ್, ಅಲಮಾ ಅಂಜುಮ್, ಕು. ಸ್ನೇಹಾ,ರೇಣುಕಾ, ಶರಣಮ್ಮ, ಶಹನವಾಜ್,ಅನೀಸ್,ಮಹೇಶಕುಮಾರ ಸೇರಿದಂತೆ ಶಿಕ್ಷಕರು ಹಾಗೂ ಶಾಲಾಮಕ್ಕಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago