ಬಿಸಿ ಬಿಸಿ ಸುದ್ದಿ

ಸಚಿವ ಸಂಪುಟಕ್ಕೆ ಶಾಸಕ ಮತ್ತಿಮೂಡ್ ಸೇರ್ಪಡೆಗೆ ಹರಳಯ್ಯ ಸಮಾಜದ ಆಗ್ರಹ

ಕಲಬುರಗಿ: ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂದು ಶ್ರೀ ಶಿವಶರಣ್ ಹರಳಯ್ಯ ಸಮಾಜ (ಹಟಗಾರ್), ಮಚಗಾರ್ ಸಮಾಜದ ಜಿಲ್ಲಾಧ್ಯಕ್ಷ ಕಾಶಿರಾಯ್ ಎಸ್. ನಂದೂರಕರ್ ಅವರು ಇಲ್ಲಿ ಒತ್ತಾಯಿಸಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರು ಇಡೀ ರಾಜ್ಯದಲ್ಲಿ ಹರಳಯ್ಯ ಸಮಾಜದಿಂದ ಆಯ್ಕೆಯಾದ ಏಕೈಕ ಶಾಸಕರು. ಆದ್ದರಿಂದ ಸಮಾಜಕ್ಕೆ ಪ್ರಾತಿನಿಧ್ಯ ಕೊಡಲು ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಹಾಗೂ ಮುಖ್ಯಮಂತ್ರಿಗಳಾಗಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಸ್ವೀಕರಿಸಿದ್ದು ಸಮಾಜಕ್ಕೆ ಅತೀವ ಸಂತೋಷವನ್ನು ತಂದಿದೆ. ಸಾಮಾಜಿಕ ನ್ಯಾಯದ ಪರವಾಗಿ ಯಡಿಯೂರಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ಪ್ರಾತಿನಿಧ್ಯ ಕೊಡಲು ಮತ್ತಿಮೂಡ್ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಅವರು ಕೋರಿದರು.

ಇಲ್ಲಿಯವರೆಗೆ ಹರಳಯ್ಯ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವ ಹರಳಯ್ಯ ಸಮಾಜಕ್ಕೆ ಸೂಕ್ತ ಸ್ಥಾನ ದೊರಕಿಸಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಹೆಬ್ಬಾಳಕರ್, ಶಿವಶರಣಪ್ಪ ದೊಡ್ಡಮನಿ, ಶಿವಶರಣಪ್ಪ ಹೀರಾಪೂರ್ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago