ಸುರಪುರ: ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುಷ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮದ ರೈತ ಸಿದ್ದಪ್ಪ ಓಂರಾಯ ಬಡಿಗೇರ (೨೬ವರ್ಷ) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು ಆ೨೧(ಸೋಮವಾರ) ರಂದು ರೈತನಾದ ಸಿದ್ದಪ್ಪ ಬಡಿಗೇರ ಬೆಳಿಗ್ಗೆ ೪ಗಂಟೆಗೆ ಬೆಳೆಗಳಿಗೆ ಸಿಂಪಡಿಸಲು ಮನೆಯಲ್ಲಿ ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿದ್ದು ತಕ್ಷಣವೇ ಈತನನ್ನು ಮನೆಯನವರು ಹಾಗೂ ಅಕ್ಕಪಕ್ಕದವರು ಸುರಪುರ ಸರಕಾರಿ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕಳುಹಿಸಿಕೊಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಆ೨೫(ಗುರುವಾರ) ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ರೈತ ಸಿದ್ದಪ್ಪನಿಗೆ ಶೆಳ್ಳಗಿ ಸೀಮಾಂತದಲ್ಲಿ ಕೇವಲ ೧.೧೦ಗುಂಟೆ ಜಮೀನು ಇದ್ದು ವ್ಯವಸಾಯಕ್ಕಾಗಿ ದೇವಾಪುರ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ೨೫ಸಾವಿರ ರೂ ಸಾಲ ಹಾಗೂ ಕೈಗಡವಾಗಿ ಹೊರಗಿನವರಿಂದ ೨ಲಕ್ಷ ರೂ ಸಾಲ ಇತ್ತು ಎಂದು ತಿಳಿದುಬಂದಿದೆ. ಈ ಕುರಿತು ಮೃತ ರೈತರನ ತಾಯಿ ದೂರು ನೀಡಿದ್ದು ಸುರಪುರ ಪೋಲಿಸರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…