ಸುರಪುರ:ಪೊಲೀಸ್ ಠಾಣೆಯಲ್ಲಿ ಗಣೇಶ ಉತ್ಸವ ಶಾಂತಿ ಸಭೆ

0
15

ಸುರಪುರ: ನಗರದ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿಯ ಆವರಣದಲ್ಲಿ ಗಣೇಶ ಉತ್ಸವದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಡಾ:ಮಂಜುನಾಥ ಟಿ. ಮಾತನಾಡಿ, ಈ ಬಾರಿಯ ಗಣೇಶ ಉತ್ಸವ ಆಚರಿಸುವವರ ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

Contact Your\'s Advertisement; 9902492681

ಗಣೇಶನನ್ನು ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಸ್ಥಳಿಯ ನಗರಸಭೆ ಅಥವಾ ಗ್ರಾಮ ಪಂಚಾಯಿತಿ ಮತ್ತು ಜೆಸ್ಕಾಂ ವತಿಯಿಂದ ಪರವಾನಿಗೆ ತೆಗೆದುಕೊಳ್ಳಬೇಕು ಹಾಗೂ ೬ ಅಡಿಗಿಂತ ಎತ್ತರದ ಗಣೇಶನನ್ನು ಪ್ರತಿಷ್ಠಾಪಿಸುವಂತಿಲ್ಲ,ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆಯ ೬ ಗಂಟೆಯವರೆಗೆ ಧ್ವನಿವರ್ಧಕವನ್ನು ಹಚ್ಚುವಂತಿಲ್ಲ ಎಂದು ತಿಳಿಸಿದರು.ಪಿಒಪಿ ಗಣೇಶನನ್ನು ಪ್ರತಿಷ್ಠಾಪಿಸುವ ಬದಲಾಗಿ ಮಣ್ಣಿನ ಗಣೇಶನನ್ನು ಪ್ರತಿಷ್ಠಾಪಿಸುವಂತೆ ತಿಳಿಸಿದರು.ಅಲ್ಲದೆ ಗಣೇಶನ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಸುರಪುರ ಠಾಣೆ ಪಿಐ ಸುನೀಲಕುಮಾರ ಮೂಲಿಮನಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಪಿಎಸ್‌ಐ ಕೃಷ್ಣಾ ಸುಬೇದಾರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅನೇಕ ಜನ ಸಾರ್ವಜನಿಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here