ಸುರಪುರ: ನಗರದ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿಯ ಆವರಣದಲ್ಲಿ ಗಣೇಶ ಉತ್ಸವದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಡಾ:ಮಂಜುನಾಥ ಟಿ. ಮಾತನಾಡಿ, ಈ ಬಾರಿಯ ಗಣೇಶ ಉತ್ಸವ ಆಚರಿಸುವವರ ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.
ಗಣೇಶನನ್ನು ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಸ್ಥಳಿಯ ನಗರಸಭೆ ಅಥವಾ ಗ್ರಾಮ ಪಂಚಾಯಿತಿ ಮತ್ತು ಜೆಸ್ಕಾಂ ವತಿಯಿಂದ ಪರವಾನಿಗೆ ತೆಗೆದುಕೊಳ್ಳಬೇಕು ಹಾಗೂ ೬ ಅಡಿಗಿಂತ ಎತ್ತರದ ಗಣೇಶನನ್ನು ಪ್ರತಿಷ್ಠಾಪಿಸುವಂತಿಲ್ಲ,ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆಯ ೬ ಗಂಟೆಯವರೆಗೆ ಧ್ವನಿವರ್ಧಕವನ್ನು ಹಚ್ಚುವಂತಿಲ್ಲ ಎಂದು ತಿಳಿಸಿದರು.ಪಿಒಪಿ ಗಣೇಶನನ್ನು ಪ್ರತಿಷ್ಠಾಪಿಸುವ ಬದಲಾಗಿ ಮಣ್ಣಿನ ಗಣೇಶನನ್ನು ಪ್ರತಿಷ್ಠಾಪಿಸುವಂತೆ ತಿಳಿಸಿದರು.ಅಲ್ಲದೆ ಗಣೇಶನ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಸುರಪುರ ಠಾಣೆ ಪಿಐ ಸುನೀಲಕುಮಾರ ಮೂಲಿಮನಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಪಿಎಸ್‌ಐ ಕೃಷ್ಣಾ ಸುಬೇದಾರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅನೇಕ ಜನ ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…