ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಮಕ್ತಂಪೂರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಪ್ರವಚನ ಕಾರ್ಯಕ್ರಮ ಗುರುವಾರ ಸಂಜೆ ಆರಂಭವಾಯಿತು.
ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಶಾಂತವೀರಪ್ಪ ಕಲ್ಯಾಣಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಧನಶೆಟ್ಟಿ, ಜಿಲ್ಲಾ ಸಮಾಜದ ಅಧ್ಯಕ್ಷ ಘಾಳೇಪ್ಪ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಶಾಂತಪ್ಪ ವ್ಹಿ.ಘೂಳಿ, ಡಾ.ರವೀಂದ್ರ ನಾಗಲೀಕರ್, ಆನಂದ ದಂಡೋತಿ, ನಾಗೇಶ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಸೆ.೪ರವರೆಗೆ ಪ್ರತಿದಿನ ಸಂಜೆ ೭ರಿಂದ ೮.೩೦ರವರೆಗೆ ಪ್ರವಚನ ನಡೆಯಲಿದ್ದು, ಶಿವಶಂಕರ ಬಿರಾದಾರ ಕೋಟನೂರು(ಡಿ) ಅವರು ಪ್ರವಚನಕಾರರಾಗಿದ್ದು, ಇವರಿಗೆ ಮಹಾಂತೇಶ ಹುಲ್ಲೂರು ಅವರು ತಬಲಾ ಸಾಥ್ ನೀಡಲಿದ್ದಾರೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…