ಕಲಬುರಗಿ: ಕೋಲಿ ಸಮಾಜದ ೩೯ ಪರ‍್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ಸಿನ ರಾಜ್ಯ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಒತ್ತಾಯಿಸಿದರು.
ವಿಧಾನಮಂಡಲದ ಅಧಿವೇಶನದ ಮೇಲ್ಮನೆ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹಲವಾರು ವರ್ಷಗಳಿಂದ ಸಮಾಜವು ಒತ್ತಾಯಿಸುತ್ತಿದೆ. ಹಲವಾರು ಸಂದರ್ಭಗಳಲ್ಲಿ ನಿರಂತರ ಹೋರಾಟಗಳನ್ನು ಮಾಡಲಾಗುತ್ತಿದೆ. ಆದ್ದರಿಂದ ಬಹುದಿನಗಳಿಂದ ಬಾಕಿ ಇರುವ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಹೈದ್ರಾಬಾದ್ ಕರ್ನಾಟಕಕ್ಕೆ ೩೭೧(ಜೆ) ಕಲಂ ಜಾರಿಯಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ರಾಜ್ಯ ಸರ್ಕಾರವು ೧,೫೦೦ ಕೋಟಿ ರೂ.ಗಳನ್ನು ಕೊಡುತ್ತಿದೆ. ಪ್ರಸ್ತುತ ವರ್ಷದಿಂದ ಇನ್ನೂ ೧೦೦೦ ಕೋಟಿ ರೂ.ಗಳನ್ನು ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…