ಟಿಪ್ಪು ಜಯಂತಿ ರದ್ದು: ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

0
44

ಕಲಬುರಗಿ: ರಾಜ್ಯ ಸರ್ಕಾರವು ಟಿಪ್ಪು ಜಯಂತಿಯನ್ನು ರದ್ದುಪಡಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಜರ್ ಆಲಂಖಾನ್, ಫಾರೂಖ್ ಮನಿಯಾರ್, ಶಿವಾನಂದ್ ಹುನಗುಂಟಿ, ರಾಜು ಜಾನೆ, ಕಿಶೋರ್ ಗಾಯಕವಾಡ್ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪ್ರತಿಭಟನೆಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಯಡಿಯೂರಪ್ಪ ಅವರ ನೇತೃತ್ವದ ರಾಜ್ಯದಲ್ಲಿನ ಬಿಜೆಪಿ ಸರ್ಕಾರವು ಟಿಪ್ಪು ಜಯಂತಿಯನ್ನು ರದ್ದುಪಡಿಸಿದ್ದು ದ್ವೇಷ ರಾಜಕೀಯದ ಪರಮಾವಧಿಯಾಗಿದೆ. ಬಿಜೆಪಿಗೆ ಟಿಪ್ಪು ಕೇವಲ ಮತಬ್ಯಾಂಕ್ ಪ್ರಚೋದನೆಯ ಸರಕು ಎಂದು ಟೀಕಿಸಿದರು.

ವಾಸ್ತವವಾಗಿ ಟಿಪ್ಪು ಭಾವೈಕ್ಯತೆಯ ಸಂಸ್ಕೃತಿಯ ಒಬ್ಬ ರಾಯಭಾರಿ. ಟಿಪ್ಪು ಸುಲ್ತಾನ್ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ. ನಾಡಿಗಾಗಿ ಮಕ್ಕಳನ್ನೇ ಒತ್ತೆ ಇಟ್ಟ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ಸಂಘ ಪರಿವಾರಕ್ಕೆ ಇದೆಲ್ಲ ಅರ್ಥವಾಗುವ ವಿಷಯವಲ್ಲ. ಸರ್ವ ಜನಾಂಗದ ಶಾಂತಿಯ ತೋಟವನ್ನು ಹಿಂಬಾಗಿಲಿನ ಮುಖ್ಯಮಂತ್ರಿ ಉತ್ತರಪ್ರದೇಶದ ಮಾದರಿ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು.

ಉನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕಾರು ಅಪಘಾತದ ಘಟನೆ ಆಘಾತಕಾರಿ. ತನಿಖೆ ಯಾವ ಹಂತದಲ್ಲಿದೆ? ಆರೋಪಿ ಬಿಜೆಪಿಯಲ್ಲಿ ಇನ್ನೂ ಇರುವುದು ಯಾಕೆ? ಎಂದು ಪ್ರಶ್ನಿಸಿರುವ ಅವರು, ದೇಶದಲ್ಲಿ ದ್ವೇಷ ರಾಜಕಾರಣ, ಅಸಹಿಷ್ಣುತೆ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವ ಮೂಲಕ ದೇಶದಲ್ಲಿ ಅರಾಜಕತೆ ಹಾಗೂ ಅಸಹಿಷ್ಣುತೆ ಹುಟ್ಟುಹಾಕುತ್ತಿದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡದ ಬಿಜೆಪಿಯಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here