ಬಿಸಿ ಬಿಸಿ ಸುದ್ದಿ

ರಾಜ್ಯಪಾಲ ಟಿ.ಸಿ ಗೆಹಲೋಟ್ ಮೋಹನ್ ಕುಮಾರ್ ದಾನಪ್ಪರ ಜಾಗೃತಿ ಓಟದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಆಗಸ್ಟ್ 29, ರಾಜ ಭವನದಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಕುರಿತು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟದ ಭಿತ್ತಿಪತ್ರವನ್ನ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಬಿಡುಗಡೆಗೊಳಿಸಿದರು.

ಸೆಪ್ಟೆಂಬರ್ 17 ರಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನದ ಅಂಗವಾಗಿ ನವದೆಹಲಿಯಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ದ ಕುರಿತು ರಾಷ್ಟ್ರ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಭವನದಿಂದ ಕೆಂಪು ಕೋಟೆವರೆಗೂ ತಡೆರಹಿತವಾಗಿ 3 ಗಂಟೆಗಳ ಕಾಲ ಮ್ಯಾರಥಾನ್ ಓಟದ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರ ಭಿತ್ತಿ ಪತ್ರವನ್ನ ಬಿಡುಗಡೆಗೊಳಿಸಿ ಕರ್ನಾಟಕದ ವ್ಯಕ್ತಿಯೊಬ್ಬ ರಾಷ್ಟ್ರಮಟ್ಟದಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ಪ್ರಯತ್ನ ಪ್ರಶಂಶನೀಯವೆಂದರು.

ಇದೇ ಸಂಧರ್ಭದಲ್ಲಿ ಮಾತನಾಡಿದ ಜಾಗೃತಿ ಓಟಗಾರ ಹಾಗೂ ಹೈ ಕೋರ್ಟ್ ನ ಸಿಜಿಸಿ ಮೋಹನ್ ಕುಮಾರ್ ದಾನಪ್ಪನವರು ” ಯುವ ಸಮೂಹ ಸಾಮಾಜಿಕ ಜಾಲ ತಾಣದಲ್ಲಿ ಹೆಚ್ಚಿನ ಸಮಯ ಕಳೆಯುವುದರಿಂದ ಮತ್ತು ನಿರ್ಲಕ್ಷ್ಯ ಮನೋಭಾವನೆಯಿಂದ ನಾವು ಮಾಡಬೇಕಾದ ಕರ್ತವ್ಯಗಳ ಮರೆತಿದ್ದು ಆ ಕುರಿತು ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ ಹಾಗಾಗಿ ಯುವ ಸಮೂಹವನ್ನ ಎಚ್ಚರಿಸುವ ಒಂದು ಸಣ್ಣ ಪ್ರಯತ್ನವನ್ನ ಕೈಗೊಂಡಿರುವುದಾಗಿ ತಿಳಿಸಿದರು!

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

18 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

21 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

23 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

45 mins ago