ಬಿಸಿ ಬಿಸಿ ಸುದ್ದಿ

ವಚನ ಸಾಹಿತ್ಯ ಸರ್ವಕಾಲಕ್ಕು ಪ್ರಸ್ತುತ: ಶರಣಗೌಡ ಜೈನಾಪುರ

ಸುರಪುರ: ಬಸವಣ್ಣನವರು ಮತ್ತು ಬಸವಾದಿ ಶರಣರು ಈ ನಾಡಿಗೆ ಮಹತ್ತರವಾಗಿ ಕೊಡುಗೆ ನೀಡಿದ ವಚನ ಸಾಹಿತ್ಯ ಸರ್ವಕಾಲಕ್ಕು ಪ್ರಸ್ತುತವಾಗಿದೆ ಎಂದು ಸಾಹಿತಿ ಶರಣಗೌಡ ಪಾಟೀಲ್ ಜೈನಾಪುರ ಹೇಳಿದರು.

ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಇಂದು ಅಖಿಲ ಭಾರತ ಶರಣಸಾಹಿತ್ಯ ಪರಿಷತ್ ಸುರಪುರ ತಾಲೂಕಾ ಘಟಕದವತಿಯಿಂದ ಏರ್ಪಡಿಸಿದ್ದ ವಚನದಿನ ಕಾರ್ಯಕ್ರಮದಲ್ಲಿ ವಚನಸಾಹಿತ್ಯದ ಪ್ರಸ್ತುತತೆ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ವಚನ ಸಾಹಿತ್ಯವು ಮಾನವಿಯ ಮೌಲ್ಯಗಳ ಸಂಗಮವಾಗಿದೆ ಜೊತೆಗೆ ವಚನಸಾಹಿತ್ಯ ನಮಗೆ ಬದುಕನ್ನು ಕಟ್ಟಿಕೊಡುತ್ತದೆ ಹಾಗೂ ನಮ್ಮ ಬದುಕಿನ ಪ್ರತಿಗಳಿಗೆಗೂ ವಚನಗಳ ಸಾರ ಅನ್ವಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳು ಮತ್ತು ಯುವಜನರು ಹೆಚ್ಚಾಗಿ ಶರಣ ಸಾಹಿತ್ಯ ಮತ್ತು ವಚನಸಾಹಿತ್ಯದ ಅದ್ಯಾಯನಮಾಡುವುದು ಪ್ರಸ್ತುತ ಸಂದರ್ಭಕ್ಕೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞ ಜೊತೆಗೆ ಸಾಂಸ್ಕೃತಿಕ ಸ್ಥಿತಿ, ವ್ಯಕ್ತಿತ್ವ ವಿಕಸನ ಈ ಎಲ್ಲವುಗಳ ಬಲವರ್ಧನೆಯಲ್ಲಿ ವಚನಸಾಹಿತ್ಯದ ಕೊಡುಗೆ ಮಹತ್ತರವಾಗಿದೆ ಎಂದು ಹೆಳಿದರು.
ತಾಲೂಕ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುತ್ತುರು ಜಗದ್ಗುರುಗಳ ದೂರ ದೃಷ್ಟಿಯ ಫಲವಾಗಿ ಶರಣಸಾಹಿತ್ಯ ಪರಿಷತ್ ರಚನೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪರಿಷತ್ತಿನ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶರಣಸಾಹಿತ್ಯ ಪರಿಷತ್ತಿನ ೩೫ನೇ ವರ್ಷದ ಸಂಸ್ಥಾಪನಾದಿನ ಹಾಗೂ ಲಿಂಗೈಕ್ಯ ಸುತ್ತೂರು ಶಿವರಾತ್ರಿ ಸ್ವಾಮಿಜಿಗಳ ಜನ್ಮದಿನವನ್ನು ಆಚರಿಸಲಾಯಿತು, ಇದೆ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳಿಂದ ವಚನ ಕಂಟಪಾಠ ಸ್ಪರ್ದೆ ಹಾಗೂ ವಿಧ್ಯಾರ್ಥಿನಿಯರಿಂದ ವಚನಗಾಯನ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ಪ್ರಮುಖರಾದ ವಿನೋದ ಚಾಮನಾಳ, ಶ್ರೀಕಾಂತ ರತ್ತಾಳ, ಪ್ರವೀಣ ಜಕಾತಿ, ಸಿದ್ದಪ್ರಸಾದ ಪಾಟೀಲ್ ಸೇರಿದಂತೆ ಇತರರಿದ್ದರು. ಕಾರ್ಯಕ್ರಮವನ್ನು ಸಲೀಂ ಪಾಷಾ ಅಡ್ಡೊಡಗಿ ನಿರೂಪಿಸಿದರು, ವೆಂಕಟೇಶ ಸ್ವಾಗತಿಸಿದರು, ಬಸವನಗೌಡ ಸೂಗುರು ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago