ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಬೆಳಗ್ಗೆಯೇ ಮಾಗಡಿ ಶಾಸಕ ಮಂಜುನಾಥ್ ಅವರೊಂದಿಗೆ ಬೋರೇಗೌಡರ ನಿವಾಸಕ್ಕೆ ಧಾವಿಸಿದ ಮಾಜಿ ಮುಖ್ಯಮಂತ್ರಿಗಳು; ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರಲ್ಲದೆ, ಅವರಿಗೆ 5 ಲಕ್ಷ ರೂಪಾಯಿಯ ನೆರವಿನ ಚೆಕ್ ಹಸ್ತಾಂತರ ಮಾಡಿದರು.
ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ಕುಟುಂಬದ ಸ್ಥಿತಿಗತಿಗಳನ್ನು ಕೇಳಿ ತಿಳಿದುಕೊಂಡರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ನಿನ್ನೆಯ ದಿನ ಅವಘಡದಲ್ಲಿ ಬೋರೆಗೌಡರು ನಿಧನ ಹೊಂದಿದ್ದರು. ಅವರದ್ದು ಕಷ್ಟಪಟ್ಟು ಜೀವನ ಮಾಡುತ್ತಿರುವ ಕುಟುಂಬ. ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಮ್ಮ ಒಡನಾಟದಲ್ಲಿ ಬೋರೇಗೌಡರು ಇದ್ದರು. ನಮ್ಮ ಜತೆಗೂಡಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…