ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿ ಅತ್ಯುತ್ತಮವಾಗಿದೆ ಎಂದು ಹೇಳಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಕಾರು ಚಲಿಸುವಾಗ ಆಲದ ಮರ ಉಳುಳಿಬಿದ್ದು ಸಾವನ್ನಪ್ಪಿದ್ದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಬೆಳಗ್ಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂಚತ್ವನ ಹೇಳಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹರಿಹಾಯ್ದರು.
ನಿನ್ನೆ ಅವರೇ ಅವರೇ ಸಂಗಬಸಪ್ಪನದೊಡ್ಡಿ ಹೈವೆಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.
ಕೆರೆ ಒಡೆದಿದ್ದರಿಂದ ಈ ರೀತಿ ಪ್ರವಾಹ ಆಗಿದೆ ಎಂದು ಅವರು ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿ ಹೀಗೆ ಮಾತನಾಡುವುದಲ್ಲ. ಶಾಶ್ವತವಾದ ಕೆಲಸ ಆಗಬೇಕು. ಸರ್ಟಿಫಿಕೇಟ್ ಕೊಡೋದಕ್ಕಲ್ಲ ಇವರು ಇರುವುದು. ಕಾಮಗಾರಿ ತಪ್ಪಾಗಿದ್ದರೆ ಸರಿಪಡಿಸಬೇಕು. ಪ್ರತಾಪ್ ಸಿಂಹ ಬರೀ ಪ್ರಚಾರ ತೆಗೆದುಕೊಳ್ಳೋದು ನಿಲ್ಲಿಸಲಿ. ಮೊದಲು ಜನರ ಕೆಲಸ ಮಾಡಲಿ ಎಂದು ಅವರು ಟಾಂಗ್ ಕೊಟ್ಟರು.
ಮಾಗಡಿ ಶಾಸಕ ಮಂಜುನಾಥ್ ಅವರು, ಮತ್ತಿತರರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…