ಕಲಬುರಗಿ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರಿಷತ್ತಿನ ಉದ್ದೇಶವನ್ನು ಪಾಲಿಸಿಕೊಂಡು, ತಾಲೂಕಿನಾದ್ಯಂತ ಮಕ್ಕಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲ ಬರವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆ ಮತ್ತು ದೇಶಾಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ, ತಾಲೂಕು ಘಟಕವನ್ನು ರಚಿಸಿಕೊಂಡು ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಹೊಸ ತಾಲೂಕು ಸೇರಿದಂತೆ ಎಲ್ಲಾ ತಾಲೂಕುಗಳಿಗೆ ಅಧ್ಯಕ್ಷರನ್ನು ನೇಮಿಸಿದ್ದಾರೆ.
ಕಲಬುರಗಿ ತಾಲೂಕು ಅಧ್ಯಕ್ಷರನ್ನಾಗಿ ಶಿಕ್ಷಕ ಬಾಬು ಜಾಧವ, ಅಫಜಲಪುರ ತಾಲೂಕಿಗೆ ಶಿಕ್ಷಕಿ ಚಂದ್ರಕಲಾ, ಆಳಂದ ತಾಲೂಕಿಗೆ ಪಿಯು ಕಾಲೇಜಿನ ಪ್ರಾಚಾರ್ಯ ಅಪ್ಪಾಸಾಬ ಬಿರಾದಾರ, ಸೇಡಂಗೆ ಶಿಕ್ಷಕಿ ಆರತಿ ಕಡಗಂಚಿ, ಚಿಂಚೋಳಿಗೆ ಪತ್ರಕರ್ತ ಶಿವರಾಜ ವಾಲಿ, ಜೇವರ್ಗಿಗೆ ಶಿಕ್ಷಕ ಪಂಡಿತ ನೆಲ್ಲಗಿ, ಚಿತ್ತಾಪುರಕ್ಕೆ ಶಿಕ್ಷಕ ನರಸಪ್ಪ ಚಿನ್ನಕಟ್ಟಿ ಅವರನ್ನು ನೇಮಕ ಮಾಡಿದ್ದಾರೆ.
ಹೊಸ ತಾಲೂಕುಗಳಾದ ಕಮಲಾಪುರಕ್ಕೆ ಪ್ರಾಧ್ಯಾಪಕ ಡಾ.ಶರಣಬಸಪ್ಪ ವಡ್ಡನಕೇರಿ, ಕಾಳಗಿಗೆ ಶಿಕ್ಷಕ ಮಲ್ಲಪ್ಪ ಪೂಜಾರಿ, ಯಡ್ರಾಮಿಗೆ ನಾಗಣ್ಣ ಸಜ್ಜನ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಲಬುರಗಿ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹರಿಕೃಷ್ಣ, ಉತ್ತರ ಕ್ಷೇತ್ರಕ್ಕೆ ರಾಜಕುಮಾರ ಎಸ್.ಕೆ. ಹಾಗೂ ಶಹಾಬಾದ್‌ಗೆ ಮರಲಿಂಗ ಯಾದಗಿರಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಘಟಕವನ್ನು ರಚಿಸಿ, ಮಕ್ಕಳ ಏಳಿಗೆ ಹಾಗೂ ಅವರಲ್ಲಿ ಸಾಹಿತ್ಯಾಭಿರುಚಿಗೆ ಕಾರಣವಾಗುವ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಮ.ಸಾ.ಪ.ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
Congratulations for all new block presidents of Makkala sahitya parisht
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕಲಬುರ್ಗಿ
ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರುಗಳಿ ಅಭಿನಂದನೆಗಳು ಹಾಗೂ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಹಿಪಾಲರೆಡ್ಡಿ ಸರ್ ಅವರಿಗೂ ವಂದನೆಗಳು.
(ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮುಗಿಸುವುದು)
ಶ್ರೀ ಸಂಜೀವಕುಮಾರ ನಡುಕರ
ಎಂ.ಎ.ಬಿ.ಈಡ್.ನೆಟ್ (ಪಿಹೆಚ್.ಡಿ)
ಕ್ಷೇತ್ರ ಸಂಪನ್ಮೂಲ ವ್ಯಕ್ತಿ
ಕ್ಷೇತ್ರ ಸಂಪನ್ಮೂಲ ಕೇಂದ್ರ ಬಸವಕಲ್ಯಾಣ