ಆಳಂದ: ತಾವು ಶಾಸಕರಾಗಿ ಆಯ್ಕೆಯಾದ ಮೇಲೆ ಹಿತ್ತಲ ಶಿರೂರ ಗ್ರಾಮಕ್ಕೆ ಈ ಅವಧಿಯಲ್ಲಿ ಸುಮಾರು ೨ ಕೋಟಿ ರೂ. ಅನುದಾನ ನೀಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಗುರುವಾರ ತಾಲೂಕಿನ ಹಿತ್ತಲ ಶಿರೂರ ಗ್ರಾಮದಲ್ಲಿ ೨೦೨೧-೨೨ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ಮಂಜೂರಾದ ರೂ. ೧೫.೮೧ ಲಕ್ಷಗಳ ಅಂಬಿಗರ ಚೌಡಯ್ಯನವರ ಸಮುದಾಯ ಭವನ ನಿರ್ಮಾಣ ಹಾಗೂ ಮಾನ್ಯ ಮುಖ್ಯಮಂತ್ರಿಗಳ ವಿಶೇ? ಅನುದಾನದಡಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. ೨೦.೦೦ ಲಕ್ಷಗಳ ಅಂಬಾ ಭವಾನಿ ದೇವಸ್ಥಾನದ ನಿರ್ಮಾಣ ಕಾಮಗಾರಿಗಳ ಭೂಮಿ ಪೂಜೆ ನೇವೇರಿಸಿ ಶಾಸಕರಾದ ಸುಭಾ? ಆರ್ ಗುತ್ತೇದಾರ ಅವರು ಮಾತನಾಡಿದರು.
ಗ್ರಾಮದಲ್ಲಿ ಗ್ರಾಮ ಪಂಚಾಯತ ನೂತನ ಕಟ್ಟಡ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಸಮುದಾಯ ಭವನ, ಕ್ಷೇಮಪಾಲನಾ ಕೇಂದ್ರ ನಿರ್ಮಾಣ, ಪ್ರೌಢಶಾಲೆಗೆ ಆವರಣ ಗೋಡೆ, ಸಿಸಿ ರಸ್ತೆ, ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರ ಸೇರಿದಂತೆ ಅನೇಕ ಕಾಮಗಾರಿ ಪೂರ್ಣಗೊಳಿಸಲು ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರರಾದ ಸಂದೀಪ, ಮುಖಂಡರಾದ ರಾಜಶೇಖರ ಮಲಶೆಟ್ಟಿ, ಗಿರೀಶ ಕುಲಕರ್ಣಿ, ಶರಣಬಸಪ್ಪ ಸರಸಂಬಿ, ಅಮೃತ ಬಿಬ್ರಾಣಿ, ಶರಣಪ್ಪ ನಾಟಿಕಾರ, ನಿಂಗಣ್ಣ ಮಾಸ್ಟರ್ ದೆನಕ, ಪ್ರಭು ಸರಸಂಬಿ, ರಾಜು ಧಂಗಾಪೂರ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…