ಬೆಂಗಳೂರು: ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕ್ರಿಯೆ ನೀಡಿ ಮೋದಿ ಯಾಕೆ ಬರುತ್ತಾರೆ? ಯಾವ ಅನುದಾನ ಕೊಡುತ್ತಾರೆ? 2019ರಿಂದ ಕರ್ನಾಟಕದಲ್ಲಿ 35 – 40 ಸಾವಿರ ಕೋಟಿ ರೂ. ನಷ್ಟವಾಗಿದೆ. ಆದರೆ NDRF ನಿಂದ ಕೇವಲ 3 ಸಾವಿರ ಕೋಟಿ ಕೊಟ್ಟಿದ್ದಾರೆ. ಯಾವ ಪುರುಷಾರ್ಥಕ್ಕೆ ಅವರು ಬರುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ಈಗ ಚುನಾವಣೆ ದೃಷ್ಟಿಯಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ತೆಗೆಯದಿದ್ದರೆ ಈ ಸಮಸ್ಯೆ ಪ್ರತಿವರ್ಷ ಬರುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅಪಾಯಕಾರಿ ಎಂದು ಕುಮಾರಸ್ವಾಮಿ ಅವರು ಹೇಳಿದರು.