ಬಿಸಿ ಬಿಸಿ ಸುದ್ದಿ

ಶಹಾಬಾದನಲ್ಲಿ ಗಾಯಕಿ ಎಮ್.ಡಿ.ಪಲ್ಲವಿ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ

ಶಹಾಬಾದ: ನಗರದ  ಲಕ್ಷ್ಮಿ ಗಂಜ್ ತರುಣ ಸಂಘ ಹಾಗೂ ಅಡತ್ ಹಾಗೂ ದಾಲಮಿಲ್ ಸಂಘದ ವತಿಯಿಂದ ೩೭ ನೇ ಗಣೇಶ ಉತ್ಸವ ಅಂಗವಾಗಿ ಸೆಪ್ಟೆಂಬರ್ ೭ ರಂದು ಗಂಗಮ್ಮ ಶಾಲೆಯ ಆವರಣದಲ್ಲಿ ಸಂಜೆ ೬ ಗಂಟೆಗೆ ಕರ್ನಾಟಕ ರಾಜ್ಯದ ಪ್ರಸಿದ್ಧ ಸುಗಮ ಸಂಗೀತ ಗಾಯಕಿ ಎಮ್.ಡಿ.ಪಲ್ಲವಿ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಲಕ್ಷ್ಮಿ ಗಂಜ್ ತರುಣ ಸಂಘ ಹಾಗೂ ಅಡತ್ ಹಾಗೂ ದಾಲಮಿಲ್ ಸಂಘದ ಅಧ್ಯಕ್ಷ ಶಿವಕುಮಾರ ಇಂಗಿನಶೆಟ್ಟಿ ತಿಳಿಸಿದರು.

ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಈಗಾಗಲೇ ಬಹಳ ವರ್ಷಗಳಿಂದ ಲಕ್ಷ್ಮಿ ಗಂಜ್ ತರುಣ ಸಂಘ ಪ್ರತಿವರ್ಷ ಒಂದಿಲ್ಲೊಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬರುತ್ತಿದೆ.ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಗಳನ್ನು ಸಲ್ಲಿಸುವುದರ ಜತೆಗೆ ಸಾಮಾಜಿಕ ಸೇವೆಯಲ್ಲಿ ತೊಡಗಿದೆ.ಕೊರೊನಾ ಹಾವಳಿಯಿಂದ ಕಳೆದ ಎರಡು ವರ್ಷಗಳಿಂದ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಲಿಲ್ಲ.ಹಾಗಾಗಿ ಈ ಬಾರಿ ಸಂಗೀತದ ಮೂಲಕ ಸಾರ್ವಜನಿಕರಿಗೆ ಒಂದಿಷ್ಟು ಉಲ್ಲಾಸ, ಮನಸ್ಸಿಗೆ ಮುದ ನೀಡುವಂಥ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವೆ.ಅದಕ್ಕಾಗಿ ನಾಡಿನ ಪ್ರಸಿದ್ಧ ಸುಗಮ ಸಂಗೀತ ಗಾಯಕಿ ಹಾಗೂ ನಟನೆಯಲ್ಲೂ ಸೈ ಎನಿಸಿಕೊಂಡ ಎಮ್.ಡಿ.ಪಲ್ಲವಿ ಹಾಗೂ ಅವರ ತಂಡವನ್ನು ಆಹ್ವಾನಿಸಿದ್ದೆವೆ.

ಈ ಸಂಗೀತ ಸಂಜೆ ಕಾರ್ಯಕ್ರಮವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸಲಿದ್ದಾರೆ. ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಎಸ್‌ಪಿ ಇಶಾ ಪಂತ್, ತಾಲೂಕಾ ತಹಸೀಲ್ದಾರ ಸುರೇಶ ವರ್ಮಾ,ಡಿವಾಯ್‌ಎಸ್‌ಪಿ ಉಮೇಶ ಚಿಕ್ಕಮಠ, ಶರಣಬಸವೇಶ್ವರ ಜ್ಞಾನ ವಿಕಾಸ ಪೀಠದ ಅಧ್ಯಕ್ಷರಾದ ಹಣಮಂತರಾವ ಇಂಗಿನಶೆಟ್ಟಿ, ಕಾರ್ಯದರ್ಶಿ ಭೀಮಾಶಂಕರ ಮುಟ್ಟತ್ತಿ, ಜಿಪಂ ಮಾಜಿ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ಮರತೂರ,ಕಸಾಪ ತಾಲೂಕಾ ಅಧ್ಯಕ್ಷ ಶರಣಬಸಪ್ಪ ಕೋಬಾಳ, ಉದ್ದಿಮೆದಾರ ನರೇಂದ್ರ ವರ್ಮಾ, ಲಕ್ಷ್ಮಿ ಗಂಜ್ ತರುಣ ಸಂಘದ ಅಧ್ಯಕ್ಷ ಶಿವುಮಾರ ಇಂಗಿನಶೆಟ್ಟಿ ಆಗಮಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಗಣ್ಯರಾದ ಅಣವೀರ ಇಂಗಿನಶೆಟ್ಟಿ, ಭೀಮರಾವ ಮೇಟಿ,ಬಾಬುರಾವ ಪಂಚಾಳ, ಪ್ರಶಾಂತ ಮರಗೋಳ, ವಿಶ್ವರಾಧ್ಯ ಬಿರಾಳ, ಅಪ್ಪು ನಾಗಶೆಟ್ಟಿ,ಸೋಮು ಪಾಟೀಲ ನರಿಬೋಳ, ಗುರುಪ್ರಸಾದ ಕೋಬಾಳ,ಜಗು ಪೂಜಾರಿ ಇತರರು ಇದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago