ಬೆಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ ೩೮೦೦ ಕೋಟಿ ರೂ. ಮೊತ್ತದ ೮ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ೩೦ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ ೩೦ಲಕ್ಷ ಫಲಾನುಭಿಗಳಿಗೆ ೪ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.
ದೇಶದ ಪ್ರಥಮ ಸ್ವದೇಶಿ ಏರ್ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ ೩೮೦೦ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ. ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಅವರು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ೩೮೦೦ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ
ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ರಾಜ್ಯದ ಸಿಆರ್ಜೆಡ್ ಮಾಸ್ಟರ್ ಪ್ಲಾನ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕಳೆದ ೩೦ವರ್ಷಗಳ ಹೋರಾಟಕ್ಕೆ ಇದೀಗ ಫಲ ದೊರಕಿದೆ. ಇದರಿಂದ ಕರಾವಳಿಯ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಸಾಗರ ಮಾಲಾ ಯೋಜನೆಯಡಿ ಕಾರವಾರ ಬಂದರಿನಲ್ಲಿ ರೂ.೨೭೬ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳುತ್ತಿವೆ. ಇದೇ ರೀತಿ ಹೊನ್ನಾವರ ಮತ್ತು ಕುಮಟಾ ಬಂದರುಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಪಿಎಂ ಮತ್ಸ್ಯ ಸಂಪದ ಯೋಜನೆಯಡಿ ಆಳ ಮೀನುಗಾರಿಕೆಗೆ ಹೈಸ್ಪೀಡ್ ಬೋಟ್ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ೪೦ಶೇಕಡಾ ಸಬ್ಸಿಡ ಒದಗಿಸಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…