ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಮಕ್ತಂಪೂರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಆ.೨೫ರಿಂದ ಹಮ್ಮಿಕೊಂಡಿರುವ ಪ್ರವಚನ ಮುಕ್ತಾಯ, ಪ್ರತಿಭಾ ಪುರಸ್ಕಾರ ಸಮಾರಂಭ ಸೆ.೪ರಂದು ನಡೆಯಲಿದೆ.
ಬೆಳಿಗ್ಗೆ ೧೦ಕ್ಕೆ ಪ್ರವಚನ ಮಂಗಲ ಕಾರ್ಯಕ್ರಮ ನಡೆಯಲಿದೆ. ಮಕ್ತಂಪುರ ಶ್ರೀ ಗುರುಬಸವ ಬೃಹನ್ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಗದ್ದುಗೆ ಮಠದ ಶ್ರೀ ವಿಜಯ ಮಹಾಂತೇಶ ದೇವರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ಮಾಜಿ ಸದಸ್ಯ ಬಸವರಾಜ ನಾಶಿ ಆಗಮಿಸುವರು. ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಶಾಂತವೀರಪ್ಪ ಕಲ್ಯಾಣಿ, ಜಿಲ್ಲಾ ಸಮಾಜದ ಅಧ್ಯಕ್ಷ ಘಾಳೇಪ್ಪ ದೊಡ್ಡಮನಿ ಅಧ್ಯಕ್ಷತೆ ವಹಿಸುವರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.೮೦ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಸಮಾಜದ ಮೂವರು ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ವಿತರಿಸಲಾಗುತ್ತದೆ.
ರಾತ್ರಿ ೮.೩೦ರಿಂದ ಬೆಳಗಿನ ಜಾವದವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸೆ.೫ರಂದು ಮಧ್ಯಾಹ್ನ ೨ರಿಂದ ಸಂಜೆ ೭ ಗಂಟೆವರೆಗೆ ಶ್ರೀ ಜಡೆ ಶಂಕರಲಿಂಗ ದೇವರ ಪಲ್ಲಕ್ಕಿ ಉತ್ಸವ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.
ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಾಜದ ಜಿಲ್ಲಾ ಅಧ್ಯಕ್ಷ ಘಾಳೆಪ್ಪ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಶಾಂತಪ್ಪ ವ್ಹಿ.ಘೂಳಿ, ಟ್ರಸ್ಟ್‌ನ ಅಧ್ಯಕ್ಷ ಶಾಂತವೀರಪ್ಪ ಕಲ್ಯಾಣಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಧನಶೆಟ್ಟಿ ಅವರು ಮನವಿ ಮಾಡಿದ್ದಾರೆ.