ಶರಣಬಸವ ವಿವಿಯಲ್ಲಿ 21 ದಿನ ಪದವಿ ವಿದ್ಯಾರ್ಥಿಗಳಿಗೆ ಇಂಡೆಕ್ಷನ್ ಕಾರ್ಯಕ್ರಮ ಆರಂಭ

0
222

ಕಲಬುರಗಿ: ಉನ್ನತ ಶಿಕ್ಷಣಕ್ಕೆ ಹೆಬ್ಬಾಗಿಲು ತೆರೆದಿರುವ ನಗರದ ಶರಣಬಸವ ವಿಶ್ವವಿದ್ಯಾಲಯದ ವಿಭಾಗಳಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ  ೨೧ ದಿನ ಇಂಡೆಕ್ಷನ್ ಕಾರ್ಯಕ್ರಮವನ್ನು ಇಲ್ಲಿನ ಸೆಂಟೆನರಿ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ ೯ ಗಂಟೆಗೆ ಉದ್ಘಾಟಿಸಲಾಗುವುದು.

ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಉದ್ಘಾಟಿಸಲಿದ್ದಾರೆ. ಪರಮ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಸಾನ್ನಿಧ್ಯ ವಹಿಸಲಿದ್ದಾರೆ. ವಿವಿ ಕುಲಪತಿ ಡಾ.ನಿರಂಜನ್ ನಿಷ್ಠಿ, ಸಮಕುಲಪತಿ ಡಾ.ವಿ.ಡಿ.ಮೈತ್ರಿ ಮತ್ತು ಎನ್.ಎಸ್.ದೇವರಕಲ್, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಪಾಟೀಲ ಉಪಸ್ಥಿತಿ ವಹಿಸಲಿದ್ದಾರೆ ಎಂದು ವಿವಿ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಬುಧವಾರ ತಿಳಿಸಿದರು.

Contact Your\'s Advertisement; 9902492681

ವಿಶ್ವವಿದ್ಯಾಲಯ ಮತ್ತು ವಿವಿಧ ಕಾಲೇಜುಗಳಲ್ಲಿ ಪದವಿ ಪ್ರವೇಶ ಪಡೆದ ಹೊಸ ವಿದ್ಯಾರ್ಥಿಗಳಿಗೆ (ಯುಜಿಸಿ) ವಿಶ್ವವಿದ್ಯಾಲಯ ಧನಸಹಾಯ ಆಯೋಗ ’ದೀಕ್ಷಾರಂಭ’ ಇಂಡಕ್ಷನ್ ಕಾರ್ಯಕ್ರಮ ಕಡ್ಡಾಯಗೊಳಿಸಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಯಸಿಟಿಇ) ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಇಂಡಕ್ಷನ್ ಕಾರ್ಯಕ್ರಮ ಕಡ್ಡಾಯಗೊಳಿಸಿದೆ.

ಮಾನವ ಸಂಪನ್ಮೂಲ ಸಚಿವಾಲಯ ಮತ್ತು ಯುಜಿಸಿ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಆವರಣ ಹಾಗೂ ಶಿಕ್ಷಕರ ಬಗ್ಗೆ ಅರಿತುಕೊಳ್ಳಲು ಮತ್ತು ಹೊಸ ವಿದ್ಯಾರ್ಥಿಗಳ ಜೊತೆ ಒಡನಾಟ ಬೆಳೆಸಿಕೊಳ್ಳಲು ಅನುಕೂಲವಾಗುವ ಉದ್ದೇಶದಿಂದ ಇಂಡಕ್ಷನ್ ಕಡ್ಡಾಯಗೊಳಿಸಿದೆ. ಪದವಿ ಶಿಕ್ಷಣಕ್ಕೆ ಹೊಸದಾಗಿ ಪ್ರವೇಶ ಪಡೆದವರಿಗೆ ಜಿಲ್ಲೆಯ ಸುತ್ತ ಮುತ್ತಲಿನ ಪ್ರದೇಶಗಳ ಐತಿಹಾಸಿಕ ಮಹತ್ವದ ಸ್ಥಳ ಮತ್ತು ಕೈಗಾರಿಕ ಪ್ರದೇಶಗಳಿಗೆ ಭೇಟಿ ನೀಡುವುದರ ಕುರಿತು ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಲಿದ್ದಾರೆ.

ಶ್ರೇಷ್ಠ ಭಾಷಣಕಾರರಾದ ಡಾ. ಆರ್.ಆರ್.ಚಂದ್ರಶೇಖರ, ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಸಮಸ್ಯೆ ಮತ್ತು ಪರಿಹಾರ ಕುರಿತು ಹಲವಾರು ಪುಸ್ತಕಗಳನ್ನು ಬರೆದಿರುವ ಮನೋವೈದ್ಯ ಡಾ. ನಾ. ಸೋಮಶೇಖರ, ಪ್ರಸಿದ್ಧ ಲೇಖಕ ಯೆಂಡಮೂರಿ ವೀರೇಂದ್ರನಾಥ್, ಹೈದರಾಬಾದ್ ಪ್ರೊ.ನಾಗ ಪ್ರಸಾದ್, ಹಿಂದೂ ಪತ್ರಿಕೆಯ ಹಿರಿಯ ಮಾಜಿ ಪ್ರಾದೇಶಿಕ ವ್ಯವಸ್ಥಾಪಕ ರಂಗರೆಡ್ಡಿ, ತೆಲಂಗಾಣ ಟುಡೇ ಇಂಗ್ಲೀಷ ಪತ್ರಿಕೆಯ ಉಪ ಸಂಪಾದಕ ವೀರೇಂದ್ರರಾವ್, ಹೈದರಬಾದ್ ಮತ್ತು ಇತರ ಪ್ರದೇಶಗಳಿಂದ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here