ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೈದ್ರಾಬಾದ ಕರ್ನಾಟಕ ಭಾಗ ವಿಮೋಚನೆಗೊಂಡು ಅಮೃತ ಮಹೋತ್ಸವದ ಹೊಸ್ತಿಲಲ್ಲಿ ಇದೆ.ಆದರೂ ಈ ಪ್ರದೇಶ ಸರ್ಕಾರಗಳಿಂದ ಪದೇ ಪದೇ ನಿರ್ಲಕ್ಷಕ್ಕೆ ಒಳಗಾಗುತ್ತಿದೆ.ಪ್ರಾದೇಶಿಕ ಅಸಮತೋಲನ ಹೊಗಲಾಡಿಸಲು 371 ಜೇ ಕಲಂ ಜಾರಿಗೆ ಬಂದಿದೆ.ಆದರೆ ಇದು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವಾಗಿದೆ.ಇದರ ಸಂಪೂರ್ಣ ಲಾಭ ಇನ್ನು ಸಿಕ್ಕಿಲ್ಲ.ಇಲ್ಲಿಯ ಜನರಿಗೆ ಸವಲತ್ತುಗಳು ಸಿಗುತ್ತಿಲ್ಲ.ಕಲಬುರಗಿಯಲ್ಲಿ ಕೋಶ ಕಚೇರಿ ಇನ್ನು ಅಸ್ತಿತ್ವಕ್ಕೆ ಬಂದಿಲ್ಲ.371ನೇ ಜೇ ಕಲಂ ಕೇವಲ ರಾಜಕೀಯ ಲಾಭ ಪಡೆಯಲಷ್ಟೇ ಸೀಮಿತವಾಗಿದೆ.
ಸಮರ್ಪಕ ಜಾರಿಗೆಗಾಗಿ ಅನೇಕ ಬಾರಿ ಪ್ರತಿಭಟನೆ ನಡೆಸಿದರು ಮುಖ್ಯಮಂತ್ರಿಗಳು ಕ್ಯಾರೇ ಅನ್ನುತ್ತಿಲ್ಲ.ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುತ್ತಿರುವ ಯೋಜನೆಗಳು ಉತ್ತರ ಕರ್ನಾಟಕದವರ ಪಾಲಾಗುತ್ತಿರುವುದು ನೋಡಿದರೆ ಮುಖ್ಯಮಂತ್ರಿಗಳು ನಮ್ಮ ಭಾಗಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ವರ್ಷ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಭರವಸೆಗಳನ್ನು ನೀಡಿದ್ದರು.
ನಂತರ ದಿನಗಳಲ್ಲಿ ಕೇವಲ ಸುಳ್ಳು ಭರವಸೆಯಾಗಿ ಉಳಿದಿದ್ದು ಇಲ್ಲಿನ ಜನರಿಗೆ ನಿರಾಸೆ ಮೂಡಿಸಿದೆ.ಈ ಬಾರಿಯೂ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಮುಖ್ಯಮಂತ್ರಿಗಳು ಬರಬೇಕು.ಇದಕ್ಕೂ ಮೊದಲು ವಿಭಾಗೀಯ ಕೇಂದ್ರ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು.ಅತಿವೃಷ್ಟಿಯಿಂದ ರೈತರ ಬೆಳೆಗಳು ನಷ್ಟವಾಗಿದೆ.ಕೂಡಲೇ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…