ಸುರಪುರ:ನಗರದ ದೀವಳಗುಡ್ಡದಲ್ಲಿನ ಪಿಡ್ಡಣ್ಣ ಮುತ್ಯಾ ದೇವಸ್ಥಾನದ ಬಳಿಯಲ್ಲಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮೃತ ವ್ಯಕ್ತಿ ತಾಲೂಕಿನ ಚಂದ್ಲಾಪುರ ಗ್ರಾಮದ ಮಡಿವಾಳಪ್ಪ (೨೪ ವರ್ಷ) ಎಂದು ಹೇಳಲಾಗಿದೆ.
ಬುಧವಾರ ಬೆಳಿಗ್ಗೆ ದೇವಸ್ಥಾನಕ್ಕೆ ಹೋದಾಗ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ಧಾರೆ.ಅಲ್ಲದೆ ಮೃತ ವ್ಯಕ್ತಿ ಸಂಬಂಧಿಕರು ಆಗಮಿಸಿ ಶವವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.
ಮೃತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದು ಮೃತ ವ್ಯಕ್ತಿ ಮಡಿವಾಳಪ್ಪ ಅಗಸರ ೩ ಎಕರೆ ೧೧ ಗುಂಟೆ ಜಮೀನು ಹೊಂದಿದ್ದು ರಂಗಂಪೇಟೆಯ ಎಸ್.ಬಿ.ಐ ಎಡಿಬಿ ಬ್ಯಾಂಕ್‌ಲ್ಲಿ ೪೦ ಸಾವಿರ ಹಾಗೂ ಖಾಸಗಿಯವರ ಬಳಿಯನ್ನು ಸುಮಾರು ೪ ರಿಂದ ೫ ಲಕ್ಷದಷ್ಟು ಸಾಲ ಮಾಡಿದ್ದು ಸರಿಯಾಗಿ ಬೆಳೆ ಬಾರದೇ ನಷ್ಟವಾಗಿದ್ದರಿಂದ ಸಾಲದ ಕುರಿತು ಸದಾಕಾಲ ಚಿಂತಿಸುತ್ತಿದ್ದನು,ಈಗ್ಗೆ ಕಳೆದ ಒಂದು ವಾರದಿಂದ ಸಾಲಕ್ಕೆ ಹೆದರಿ ಮನೆ ಬಿಟ್ಟು ಹೋಗಿದ್ದ,ಆದರೆ ಈಗ ದೀವಳಗುಡ್ಡದ ಪಿಡ್ಡಣ್ಣ ಮುತ್ಯಾ ದೇವಸ್ಥಾನದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ದೂರಿನಲ್ಲಿ ತಿಳಿಸಿದ್ದು,ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…