ನಮ್ಮ ಭಾಗದ ಮಕ್ಕಳು ಸ್ಫರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ:ಆರ್.ವಿ ನಾಯಕ

0
15

ಸುರಪುರ: ಕೆಸಿಎಸ್ ಆಕಾಡೆಮಿ ಧಾರವಾಡ ಮತ್ತು ಆರ್‌ವಿಎನ್ ಅಭಿಮಾನಿ ಬಳಗದ ಸಹಯೋಗದಲ್ಲಿ ನಗರದ ಶ್ರೀಪ್ರಭು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಪ್ರವೇಶದ ಅಂಗವಾಗಿ ಕಾರ್ಯಗಾರವನ್ನು ನಡೆಸಲಾಯಿತು.

ಕಾರ್ಯಗಾರವನ್ನು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಉದ್ಘಾಟಿಸಿ ಮಾತನಾಡಿ,ನಮ್ಮ ಭಾಗದ ವಿದ್ಯಾರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆಗಳು ಎದುರಿಸಲು ಇಂದು ನಮ್ಮ ಅಭಿಮಾನಿಗಳು ಹಾಗೂ ಕೆಸಿಎಸ್ ಅಕಾಡೆಮಿ ಧಾರವಾಡ ಸೇರಿ ಸುಮಾರು ೫೦ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕೊಡಿಸಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ.ಮುಂದಿನ ವರ್ಷ ದಿಂದ ೨೦೦ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ನನಗೆ ಮೊದಲಿನಿಂದಲೂ ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿಯಾಗಿದ್ದು, ಸುರಪುರ ಮತಕ್ಷೇತ್ರದಲ್ಲಿ ಶಿಕ್ಷಣ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದೇನೆ, ತಾಲೂಕಿನಲ್ಲಿ ಶಾಲೆಗಳ ಅಭಿವೃದ್ಧಿಗಾಗಿ ರಸ್ತೆ, ಸಂಚಾರ, ಶಾಲಾ ಕಟ್ಟಡ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ದೇವಿಂದ್ರಪ್ಪ ಮುದನೂರ ಮಾತನಾಡಿ, ಆರ್‌ವಿಎನ್ ಅಭಿಮಾನಿ ಬಳಗದಿಂದ ಈಗಾಗಲೇ ೫೦ ವಿದ್ಯಾರ್ಥಿಗಳಿಗೆ ಉಚಿತ ಐಎಎಸ್, ಐಪಿಎಸ್, ಕೆಎಎಸ್ ಸೇರಿಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ನಾಯಕರಾದ ರಾಜಾ ವೆಂಕಟಪ್ಪ ನಾಯಕರು ಹೇಳಿದಂತೆ ೨೦೦ ವಿದ್ಯಾರ್ಥಿಗಳಿಗೆ ಉಚಿತ ವಾಗಿ ತರಬೇತಿ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಸಿ ಅಕಾಡೆಮಿಯ ಲಕ್ಕಪ್ಪ,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಪ್ರಭು ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಹೊಸಮನಿ ಮಾತನಾಡಿದರು. ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಯಂಕೋಬ ಯಾದವ್, ಶಿವಾನಂದ ನರಗಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ವಾರೀಸ್ ಕುಂಡಾಲೆ, ಹಣಮಂತ್ರಾಯ ಮೊಕಾಶಿ ಸೇರಿದಂತೆ ಅನೇಕ ಮುಖಂಡರು,ಕಾಲೇಜಿನ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here