ಬಿಸಿ ಬಿಸಿ ಸುದ್ದಿ

50 ಕ್ಕೂ ಹೆಚ್ಚು ಜನ ಅಸ್ವಸ್ಥ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಾಸಕ ಡಾ. ಅಜಯ್ ಸಿಂಗ್ ಸೂಚನೆ

ಕಲಬುರಗಿ/ ಜೇವರ್ಗಿ: ಕುಡಿಯುವ ನೀರಿನ ಟ್ಯಾಂಕ್‍ನಲ್ಲಿರುವ ಕಲುಷಿತ ನೀರು ಕುಡಿದು  ಸುಮಾರು 50 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಡಾ. ಅಜಯ್ ಸಿಂಗ್ ಅವರು ಗ್ರಾಮದಲ್ಲಿರುವ ಬೋರವೇಲ್ , ನೀರಿನ ಟ್ಯಾಂಕ್ ಗೆ ತೆರಳಿ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮತೆಗೆದುಕೊಳ್ಳುವಂತೆ ಗ್ರಾಮಸ್ಥರ ಸಮ್ಮುಖದಲ್ಲಿ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕರು ಅನಾರೋಗ್ಯದಿಂದ ಮೃತಪಚ್ಚ ಕುಟುಂಬಕ್ಕೆ ಸ್ಥಳದಲ್ಲಿಯೇ ಸಹಾಯಧನದ ಚೆಕ್ ನೀಡಿದರು. ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಕಲುಷಿತ ನೀರು ಕುಡಿತು ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯರು, ಗ್ರಾಮಸ್ಥರು, ಪೆÇೀಲಿಸ್ ಅಧಿಕಾರಿಗಳು, ಹಿರಿಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago