ಶಹಾಪುರ: ಬರಹಗಾರ್ತಿ ಕವಯತ್ರಿ, ಸಾಹಿತಿ, ಸುರಯ್ಯ ಬೇಗಂ ಅವರನ್ನು ಯಾದಗಿರಿ ಜಿಲ್ಲೆಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾ ಧ್ಯಕ್ಷರಾದ ಸಿ.ಎನ್. ಅಶೋಕ್ ಅವರು ಪ್ರಕಟಣೆಗೆ ತಿಳಿಸಿದ್ದಾರೆ
ಮಕ್ಕಳಲ್ಲಿರುವ ಸೃಜನಾತ್ಮಕ ಸಾಹಿತ್ಯ ಪ್ರತಿಭೆಯನ್ನು ಹೊರತಂದು ಅವರಿಗೆ ಪ್ರೋತ್ಸಾಹ ನೀಡಿ ಮಕ್ಕಳ ಸಾಹಿತ್ಯಕ್ಕೆ ದುಡಿವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಸಲಹೆ ನೀಡಿದರು.
ಯಾದಗಿರಿ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕಗಳಿಗೆ ಅಧ್ಯಕ್ಷರನ್ನು ಕೂಡಲೆ ಆಯ್ಕೆ ಮಾಡುವ ಅಧಿಕಾರವನ್ನು ಸುರಯ್ಯ ಬೇಗ ಅವರಿಗೆ ಸಂಪೂರ್ಣ ಜವಾಬ್ದಾರಿ ಒಪ್ಪಿಸಲಾಗಿದೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಮಕ್ಕಳ ಸಾಹಿತ್ಯದ ಬಗ್ಗೆ ಜಿಲ್ಲೆಯಾದ್ಯಂತ ಸಂಘಟನೆ ಮಾಡುತ್ತ ಜೊತೆಗೆ ಕಾರ್ಯಕ್ರಮಗಳು ಏರ್ಪಡಿಸುವುದರ ಮುಖಾಂತರ ನಿರಂತರವಾಗಿ ಕೆಲಸ ಮಾಡಬೇ ಕು ಎಂದು ತಿಳಿಸಿದರು.