ಬಿಸಿ ಬಿಸಿ ಸುದ್ದಿ

ಬೆಂಗಳೂರಿನಲ್ಲಿ ಸೆ. ೨೫, ೨೬ ರಂದು ರೈತರ ಬೃಹತ್ ರ‍್ಯಾಲಿ

ಕಲಬುರಗಿ: ಮೂರು ಕೃಷಿ  ಕಾಯ್ದೆಗಳನ್ನು ರದ್ದುಮಾಡಿ ಎಂ.ಎಸ್.ಪಿ ಗ್ಯಾರೆಂಟಿ ಕಾನೂನು ಜಾರಿ ಮಾಡುತ್ತೇವೆ, ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ೨೦೨೧ರ ನವಂಬರ್ ತಿಂಗಳಲ್ಲಿ ಭರವಸೆ ನೀಡಿದ ಪ್ರಧಾನಿ ಮೋದಿ ಬರವಸೆ  ಹುಸಿಗೊಳಿಸಿದ್ದಾರೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಮಾಡಲು ಸಮಿತಿ ರಚಿಸಿದ್ದೇವೆ ಎನ್ನುತ್ತಲೇ  ವರ್ಷಕಾಲ  ಹೋರಾಟ ಮಾಡಿದ, ರೈತ ಮುಖಂಡರ ಹೊರಗಿಟ್ಟು  ಸಮಿತಿ ರಚಿಸಿದ   ನಾಟಕವಾಡುತ್ತಿದ್ದಾರೆ, ಆದಕಾರಣ ದೇಶಾದ್ಯಂತ ರೈತ ಚಳುವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ರಾಷ್ಟ್ರೀಯ ಮುಖಂಡರ ಕಿಸಾನ್ ಪಂಚಾಯತ್ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಅವರು ನಗರದ ಪ್ರಾಣಿ ಸಂಗ್ರಹಾಲಯದ ಹತ್ತಿರ ಯಾತ್ರಿಕ್ ನಿವಾಸ ಸಭಾಗಂಣದಲ್ಲಿ  ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಸಭೆ ನಡೆಸಿ ಈ ಸಭೆಯಲ್ಲಿ ಮಾತನಾಡಿದರು.

ಎಲ್ಲಾ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿ ಕಾತರಿ ಕಾನೂನು ಜಾರಿಗೆ  ತಂದು ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ೨೦೨೨ರ ವಿದ್ಯುತ್ ಕಾಯ್ದೆ  ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್  ನಿಲ್ಲಿಸುವ ಹುನ್ನಾರ  ಕೈಬಿಡಬೇಕು, ಕಬ್ಬಿನ ಎಫ್ ಆರ್ ಪಿ ದರ ಪುನರ್ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ನ್ಯಾಯಯುತ  ಕಬ್ಬಿನ ದರ ನಿಗದಿ ಮಾಡಬೇಕು,  ಕೃಷಿ ಉತ್ಪನ್ನಗಳ, ಹಾಗೂ ಉಪಕರಣಗಳ  ಮೇಲಿನ ಜಿ ಎಸ್ಟಿ ರದ್ದುಪಡಿಸಬೇಕು, ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರೋನ ಲಾಕ್ಡೌನ್ ಅತಿವೃಷ್ಟಿ ಮಳೆ ಹಾನಿ  ಸಂಕಷ್ಟದಿಂದ ನಲುಗಿದ್ದಾರೆ ಆದಕಾರಣ ದೇಶದ ಉದ್ಯಮಿಗಳ ೧೦ ಲಕ್ಷ ಕೋಟಿ  ಸಾಲ ಮನ್ನಾ ಮಾಡಿದ ರೀತಿಯಲ್ಲಿ,  ರೈತರ ಸಾಲ ಮನ್ನಾ ಮಾಡಬೇಕು,  ಫಸಲ್ ಭೀಮಾ ಬೆಳೆವಿಮೆ ಯೋಜನೆ  ಮಾನದಂಡ ಬದಲಾಯಿಸಬೇಕು,  ದೆಹಲಿ ಹೋರಾಟದಲ್ಲಿ  ಮಾಡಿದ ೭೫೦ ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಭರವಸೆಯಂತೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಅಂದಾಜು ೧೦ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಮಳೆ ಹಾನಿಯಿಂದ  ರೈತರ ಬೆಳೆ ನಷ್ಟ ಆಗಿದೆ ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಬೆಳೆ ನಷ್ಟ ಬಗ್ಗೆ  ಸಮರೋಪಾದಿಯಲ್ಲಿ ಸಮೀಕ್ಷೆ ನಡೆಸಿ ನೈಜನಷ್ಟ  ಪರಿಹಾರ ನೀಡಲು ಮುಂದಾಗಬೇಕು, ರೈತರಿಗೆ  ಭಿಕ್ಷೆ ರೂಪದ ಪರಿಹಾರ ಬೇಡ, ಜಿಲ್ಲಾ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾನಿಗೆ  ಒಳಗಾದ  ಹಳ್ಳಿಗಳಿಗೆ  ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂಬ ಪ್ರಮುಖ ಸಮಸ್ಯೆಗಳ ಬಗ್ಗೆ ಬೃಹತ್ ರ‍್ಯಾಲಿ ಮೂಲಕ ವಿಧಾನಸೌಧ ಚಲೋ ನಡೆಸಲಾಗುವುದು ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಬಸವರಾಜ ಪಾಟೀಲ್, ಜಿಲ್ಲಾಧ್ಯಕ್ಷ ಜಗದೀಶ್ ಪಾಟೀಲ್,  ನಾಗೇಂದ್ರರಾವ್ ದೇಶಮುಖ, ಶರಣಕುಮಾರ ಬಿಲ್ಲಾಡ ಸಾಹುಕಾರ ನೆಲೋಗಿ,  ಧರ್ಮರಾಜ್ ಸಾಹು,  ಶಾಂತಕುಮಾರ್ ಪಾಟೀಲ್, ಮಲ್ಲಣ್ಣ ಪಾಟೀಲ್,  ಸಾಮಾಜಿಕ ಜಾಲತಾಣ ಮುಖ್ಯಸ್ಥ ಬರಡನಪುರ ನಾಗರಾಜ್ ಹಾಗೂ ರೈತರು, ಮುಖಂಡರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago