ಸುರಪುರ:ನಗರದ ಶ್ರೀ ಪ್ರಭು ಮಹಾವಿದ್ಯಾಲಯಕ್ಕೆ ಶಾಸಕ ನರಸಿಂಹ ನಾಯಕ ರಾಜುಗೌಡ ಭೇಟಿ ನೀಡಿದರು.ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲು ಆಗಮಿಸಿದ್ದ ಶಾಸಕರನ್ನು ಉಪನ್ಯಾಸಕ ಹಾಗೂ ಎಬಿವಿಪಿ ಕಲಬುರ್ಗಿ ವಿಭಾಗಿಯ ಸಹಪ್ರಮುಖ ಡಾ. ಉಪೇಂದ್ರ ನಾಯಕ ಸುಬೇದಾರ ಹಾಗೂ ಇತರೆ ವಿದ್ಯಾರ್ಥಿಗಳ ಮನವಿ ಮೇರೆಗೆ ಮಹಾವಿದ್ಯಾಲಯಕ್ಕೆ ಶಾಸಕರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಶಾಸಕರಿಗೆ ತಮ್ಮ ಸಮಸ್ಯೆಗಳ ಕುರಿತು ಮಾತನಾಡಿ,ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಿರುವ ಬಸ್‌ನ ಸಮಸ್ಯೆ ನಿವಾರಿಸಲು ಕೇಳಿಕೊಂಡರು.ಅಲ್ಲದೆ ರಂಗಂಪೇಟೆಯ ಮಂಡಾಳಬಟ್ಟಿ ಬಳಿಯಲ್ಲಿ ಬಸ್‌ಗಳು ನಿಲ್ಲಿಸದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ,ಅಲ್ಲದೆ ಸ್ವಾಮಿ ವಿವೇಕಾನಂದ ಕಾಲೇಜ್ ಬಳಿಯಲ್ಲಿಯೂ ನಿಲ್ಲಿಸುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು.
ಎಲ್ಲರ ಸಮಸ್ಯೆಗಳ ಆಲಿಸಿದ ಶಾಸಕರು ಶೀಘ್ರದಲ್ಲಿಯೇ ಬಸ್‌ನ ಸಮಸ್ಯೆ ನಿವಾರಿಸುವುದಾಗಿ ತಿಳಿಸಿದರು,ಅಲ್ಲದೆ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಬಸ್‌ನ ಸಮಸ್ಯೆ ಬಾರದಂತೆ ನೋಡಿಕೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ಶ್ರೀ ಪ್ರಭು ಕಾಲೇಜ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್, ಜಿ.ಪಂ ಮಾಜಿ ಸದಸ್ಯ ಹೆಚ್.ಸಿ ಪಾಟೀಲ್,ಪ.ಪೂ ಕಾಲೇಜಿನ ಪ್ರಾಂಶುಪಾಲ ವಾರೀಸ್ ಕುಂಡಾಲೆ,ಬಾಲಕಿಯರ ಪ.ಪೂ ಕಾಲೇಜಿನ ಬಸವರಾಜ ಇನಾಂದಾರ,ಎಬಿವಿಪಿ ಕಾರ್ಯಕರ್ತರಾದ ವಿನೋದ,ಶರಣಬಸವ ,ತಿಮ್ಮಯ್ಯ,ನಾಗಭೂಷಣ ಸಾಹುಕಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…