ಶಹಾಬಾದ: ರಾಜ್ಯ ಬಿಜೆಪಿ ಸರ್ಕಾರವು ಕೋಲಿ ಸಮಾಜದ ಪರ್ಯಾಯ ಪದಗಳನ್ನು ಎಸ್‍ಟಿಗೆ ಸೇರಿಸುವುದಾಗಿ ಪದೇ ಪದೇ ಹುಸಿ ಭರವಸೆಗಳನ್ನು ನೀಡಿ ವಂಚಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್ 16ರಂದು ಕಲಬುರಗಿ ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಟಿ. ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ್ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನಾ ಪತ್ರವನ್ನು ಸಲ್ಲಿಸಲಾಗುವುದು ಎಂದರು.
ಚುನಾವಣೆಯ ಸಂದರ್ಭದಲ್ಲಿ ಪದೇ ಪದೇ ಕೋಲಿ ಕಬ್ಬಲಿಗ ಮತ್ತು ತಳವಾರ್ ಸಮಾಜಗಳಿಗೆÉ ಎಸ್‍ಟಿಗೆ ಸೇರಿಸುತ್ತೆವೆ ಎಂದು ಹೇಳಿಕೆ ನೀಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಡಾ. ಉಮೇಶ್ ಜಾಧವ್ ಸೇರಿದಂತೆ ಬಿಜೆಪಿ ನಾಯಕರು ನೀಡಿದ ಭರವಸೆ ಹುಸಿಹಾಗಿದ್ದು, ಸಮಾಜಕ್ಕೆ ಸುಳ್ಳು ಹೇಳಿ ಮೋಸ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದರು.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಮಾಜಕ್ಕೆ ಮೋಸ ಮಾಡಿ ಮತ ಪಡೆದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿಯೂ ಸಹ ಅದೇ ಸುಳ್ಳು ಭರವಸೆ ನೀಡಲಾಗಿದೆ. ಕೆಲವೇ ಹೊತ್ತಿನಲ್ಲಿ ಎಸ್‍ಟಿ ಎಸ್‍ಟಿಗೆ ಪ್ರಮಾಣಪತ್ರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಅವರೂ ಸಹ ಹೇಳಿಕೆ ನೀಡಿದ್ದು ಸುಳ್ಳಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಅವರು ಕಿಡಿಕಾರಿದರು.
ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು ಎಂದು ಹಮ್ಮಿಕೊಂಡಿರುವ ಅರೆಬೆತ್ತಲೆ ಮೆರವಣಿಗೆಯಲ್ಲಿ ಸಮಾಜದ ಚಿಂತಕರು, ಪ್ರಗತಿಪರರು ಹಾಗೂ ವಿಚಾರವಂತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಶಿವಕುಮಾರ ತಳವಾರ, ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಫಿರೋಜಾಬಾದ ಕಲಬುರಗಿ ನಗರಾಧ್ಯಕ್ಷ ಶಿವಕುಮಾರ ಯಾಗಾಪೂರ್,ಪಿಂಟು ಜಮಾದಾರ, ಕೋಲಿ ಸಮಾಜದ ಉಪಾಧ್ಯಕ್ಷ ಶಿವಕುಮಾರ ಬುರ್ಲಿ, ಪ್ರಧಾನ ಕಾರ್ಯದರ್ಶಿ ಬೆಳ್ಳೆಪ್ಪ ಖಣದಾಳ, ದೇವೆಂದ್ರ ಕಾರೊಳ್ಳಿ, ಲೋಹಿತ ಮಳಖೇಡ,ರಾಜು ಆಡಿನ್, ನಾಗರಾಜ ಯಡ್ರಾಮಿ, ಮೌನೇಶ ಕೊಡ್ಲಿ, ಭಾಗಪ್ಪ ಕೊಡಸಾ, ರಾಜು ಸಣಮೋ, ರಾಜು ಮರಗೋಳ, ಶರಣು ಕೊಡಸಾ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…