ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರದ ಬಗ್ಗೆ ಸ್ಫೋಟಕ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಅವರು ಗುಡುಗಿದರು.
ಸದನದ ಸಮಯ ಹಾಳು ಮಾಡಲಾರೆ: ನಾನು ಸುಖಾಸುಮ್ಮನೆ ಸದನ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್ ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇಂದು ಸಂತಾಪ ಚರ್ಚೆ ನಂತರ ನಾಳೆಯಿಂದ 9 ದಿನಗಳ ಕಾಲ ಅಧಿಕೃತ ವಿರೋಧ ಪಕ್ಷ ಚರ್ಚೆಗೆ ಯಾವ ರೀತಿ ಆದ್ಯತೆ ಕೊಡಲಿದೆ ಎಂಬುದನ್ನು ನೋಡುತ್ತೇವೆ. ಉತ್ತಮ ರೀತಿಯ ಕಲಾಪಕ್ಕೆ ಅವಕಾಶ ಯಾವ ರೀತಿ ಇರುತ್ತದೆ ಎಂದು ಗಮನಿಸುತ್ತೇವೆ. ಸುಮ್ಮನೆ ವಿಚಾರ ಇಲ್ಲದೆ, ದಾಖಲೆ ಇಲ್ಲದೇ ಮಾತಾಡೋದ್ರಿಂದ ಸದನದ ಕಲಾಪಕ್ಕೆ ಧಕ್ಕೆ ಆಗಲಿದೆ.
ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳ್ತಾ ಇದ್ದಾರೆ, ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಯಾರೋ ಸುಮ್ಮನೆ ನನ್ನನ್ನು ಸುಖಾಸುಮ್ಮನೆ ಅವರತ್ರ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ರೆ ವಿಷಯ ಇದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಅವರದ್ದು ಎಂದರು.
ಕೆಸಿಆರ್ ಅವರು ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಅವರು ಹೇಳಿದರು.
ನಿಖಿಲ್ ಹೇಳಿಕೆಗೆ ಅಪಾರ್ಥ ಬೇಡ: ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ನಾನೇ ಅನೇಕ ಬಾರಿ ಹೇಳಿದ್ದೇನೆ. ಈ ಚುನಾವಣೆ ನಮಗೆ ನಿರ್ಣಾಯಕ. ಈ ಚುನಾವಣೆ ಮುಂದಿನ ದಿನಗಳಿಗೆ ಬುನಾದಿ ಇದ್ದಂಗೆ. ಮುಂದಿನ 25 ವರ್ಷಕ್ಕೆ ಏನು ಆಗಬೇಕು ಅನ್ನೋದು ಮುಖ್ಯ. ಅದಕ್ಕಾಗಿ ಈ ಚುನಾವಣೆ ತುಂಬಾ ಮುಖ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಜರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…