ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿವಸದ ಕಾರ್ಯಕ್ರಮ ಜರುಗಿತು.
ಗುಲಬರ್ಗಾ ವಿಶ್ವವಿದ್ಯಾಲಯದ ಮನೋಶಾಸ್ರ್ತವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಪ್ರೊ. ಶಿವಕುಮಾರ ಚೆಂಗಟಿಯವರು ಇತ್ತಿಚಿಗೆ ವಿಶ್ವದಲ್ಲಿ ಆತ್ಮಹತ್ಯೆ ಏರುಗತಿಯಲ್ಲಿ ಸಾಗಿದೆ ಅದಕ್ಕೆ ಕಾರಣ ಕೌಟಂಬಿಕ ಕಲಹ,ಪ್ರೀತಿ ವಿವಾಹ,ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ವಿಫಲರಾಗುವುದು,ಮಾನಸಿಕ ರೋಗದಿಂದ ಬಳಲುವಿಕೆ,ಆರ್ಥಿಕ ಕುಸಿತ ಹೀಗೆ ಆತ್ಮ ಹತ್ಯೆಗೆ ಹಲವು ಕಾರಣಗಳುಂಟು,ಆದರೆ ಆತ್ಮಹತ್ಯೆಯೇ ಸಮಸ್ಯೆಗೆ ಪರಿಹಾರ ಅಲ್ಲ.ಆದ್ದರಿಂದ ಅಂತಹ ಜನರು ಕಂಡರೆ ಅವರಿಗೆ ಧೈರ್ಯ ಹೇಳಬೇಕು,ಪರಿಹಾರ ಕಂಡು ಹಿಡಿಯಬೇಕು,ಉಚಿತ ಮಾರ್ಗದರ್ಶನ ಮಾಡಬೇಕು ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳನು ಉದ್ದೇಶಿಸಿ ಹೇಳಿದರು.
ಪಲ್ಲವಿ ಮತ್ತು ಪವಿತ್ರ ಪ್ರಾರ್ಥನೆ ಗೀತೆ ಹಾಡಿದರು. ಉಪನ್ಯಾಸಕ ಶಿವಲೀಲಾ ಬೊಮ್ಮನ್ ಸ್ವಾಗತ ಮಾಡುತ್ತ ಅತಿಥಿಗಳನ್ನು ಪರಿಚಯಿಸಿದರು. ಡಾ. ವಿಜಯ ಕುಮಾರ ಪರುತೆಯವರು ಪ್ರಾಸ್ತವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಹೇಝಲ್ ಹಾಗೂ ಅಶ್ವಿನಿಯರು ಆತ್ಮಹತ್ಯೆ ಕುರಿತು ಭಾಷಣ ಮಾತನಾಡಿದರು.
ಕಾರ್ಯಕ್ರಮದ ಮೊದಲು “ಆತ್ಮಹತ್ಯೆಗೆ ಕಾರಣಗಳು,ಅರಿವು ಮತ್ತು ತಡೆಗಟ್ಟುವಿಕೆ” ಕುರಿತು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ ಕು.ಐಶ್ಯಾ ತಹಸೀನ್ ,ಕು.ಹೇಝಲ್,ಕು.ಅನಾಮಿಕಾ, ಅಂಜಲಿ ಕುಮಾರಿ, ಸೃಷ್ಟಿ ಕುಲ್ಕರ್ಣಿಯವರಿಗೆ ಮುಖ್ಯಅತಿಥಿಗಳಿಂದ ಬಹುಮಾನ ವಿತರಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಾಜೇಂದ್ರ ಕೊಂಡಾ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಛಾಯಾ ಪಾಟೀಲ್ ವಂದಿಸಿದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…