ಬಿಸಿ ಬಿಸಿ ಸುದ್ದಿ

ಉತ್ತಮ ಆಹಾರ ಪದ್ಧತಿ ಮುಖ್ಯ: ಡಾ.ಸೋಮೆಶ್ವರ

ಕಲಬುರಗಿ: ಹಾನಿಕರ ಆಹಾರ ಸೇವನೆ ಮಾಡದೇ ವಿದ್ಯಾರ್ಥಿಗಳು ಉತ್ತಮ ಆಹಾರ ಪದ್ಧತಿ ಆಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣದಲ್ಲಿ ಯಶಸ್ಸು, ಗುರಿ ಸಾಧಿಸಬೇಕಾದರೆ ವಿದ್ಯಾರ್ಥಿಗಳು ಆರೋಗ್ಯಕರ ಉತ್ತಮ ಅಧ್ಯಯನ ನಡೆಸಬೇಕು ಎಂದು ವ್ಯಕ್ತಿತ್ವ ವಿಕಾಸನ ಗುರು ಡಾ.ನಾ ಸೋಮೇಶ್ವರ ಹೇಳಿದರು.

ನಗರದ ಸೆಂಟೆನರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಶರಣಬಸವ ವಿಶ್ವವಿದ್ಯಾಲಯದ ವಿಭಾಗಳಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ೨೧ ದಿನ ನಡೆಯುವ ದೀಕ್ಷಾರಂಭ(ಇಂಡೆಕ್ಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೈಕ್ಷಣಿಕ ಅನ್ವೇಷಣೆಯಲ್ಲಿ ಯಶಸ್ವಿಯಾಗಲು ಮತ್ತು ಉನ್ನತ ಶಿಕ್ಷಣ ಸಾಧಿಸಲು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಲ್ಲ. ಅದರ ಜೊತೆಗೆ ಭಾವನಾತ್ಮಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯಕ್ಕೆ ಮಹತ್ವ ನೀಡುವ ಸಮಗ್ರ ಆರೋಗ್ಯ ವಿಧಾನವನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಹಾರ ಪದ್ಧತಿ ವಿದ್ಯಾರ್ಥಿಯ ಶೈಕ್ಷಣಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬಿರುತ್ತದೆ. ಇದರಿಂದ ಮೇದುಳಿನ ಮೇಲೆ ಕೆಟ್ಟ ಪರಿಣಾಮ ಬಿರುವ ವಿವಿಧ ಕಂಪೆನಿ ತಯಾರಿಸುತ್ತಿರುವ ತಂಪು ಪಾನೀಯಗಳು, ಜಂಕ್ ಪುಡ್, ಕೇಕ್, ಬಿಳಿ ಬ್ರೆಡ್, ಐಸ್ ಕ್ರೀಮ್‌ಗಳನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು. ಪೋಷಕರು ತಮ್ಮ ಮಕ್ಕಳಿಗೆ ತರಕಾರಿ, ಹಣ್ಣುಗಳು ಸೇರಿದಂತೆ ಸಾತ್ವಿಕ ಆಹಾರ ಕೊಡಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳ ನಿರ್ಮಾಣ ಸಾಧ್ಯ ಎಂದರು.
ಮಕ್ಕಳ ಹಿಮೋಗ್ಲೋಬಿನ್ ಮಟ್ಟ ೧೨ಕ್ಕಿಂತ ಕಡಿಮೆಯಾದರೆ ಅಧ್ಯಯನ ಗ್ರಹಿಕೆಯ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಹಿಮೋಗ್ಲೋಬಿನ್ ಮಟ್ಟ ವಿದ್ಯಾರ್ಥಿಗಳ ಗ್ರಹಿಕೆಯ ಶಕ್ತಿಗಳೊಂದಿಗೆ ನೇರ ಸಂಬಂಧವನ್ನು ಹೊಂದಿರುವದರಿಂದ ಪೋಷಕರು ತಮ್ಮ ಮಕ್ಕಳ ಹಿಮೋಗ್ಲೋಬಿನ್ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಡಾ.ಸೋಮೆಶ್ವರ್ ಭಾಗವಹಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಉತ್ತರಿಸಿ ಆರೋಗ್ಯ ಮತ್ತು ಅಭ್ಯಾಸಗಳಿಗೆ ಸಂಬಂಧಿಸಿದ ಎಲ್ಲಾ ಅನುಮಾನಗಳನ್ನು ಪರಿಹರಿಸಿದರು. ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ನಿಷ್ಠಿ ಅಧ್ಯಕ್ಷತೆ ಭಾಷಣ ಮಾಡಿ, ಶರಣಬಸವ ವಿವಿಯಲ್ಲಿ ಗುಣಮಟ್ಟ ಪಾರಾದರ್ಶಕ ಶಿಕ್ಷಣ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು. ದೇಶದಲ್ಲಿ ಯುವ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜಾಗಾತಿಕ ಮಟ್ಟದಲ್ಲಿ ಭಾರತೀಯ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ, ಜಾಗಾತಿಕ ಮಟ್ಟದಲ್ಲೇ ಭಾರತ ದೇಶ ಉತ್ಪಾದಕರ ವಯಸ್ಸು ಹೆಚ್ಚಾಗಿದೆ. ಇದರಿಂದ ಬರುವ ದಿನದಲ್ಲಿ ಪ್ರತಿಯೊಂದು ವಲಯದಲ್ಲಿ ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳುವ ಶಕ್ತಿ ಹೊಂದಿದೆ ಎಂದರು.

ಶರಣಬಸವ ವಿದ್ಯಾವರ್ದಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ವಿವಿಯು ೧೦೦ ವರ್ಷಗಳ ಶ್ರೀಮಂತ ಇತಿಹಾಸ ಹೊಂದಿದೆ. ಮತ್ತು ೧೯೩೦ರ ದಶಕದಲ್ಲಿ ಮೊದಲ ಬಾರಿಗೆ ಮಹಿಳೆಯರ ಶೈಕ್ಷಣಿಕ ಸಬಲೀಕರಣಕ್ಕೆ ದಾರಿ ಮಾಡಿಕೊಟ್ಟ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಕು.ರೇವತಿ ಪ್ರಾರ್ಥಿಸಿದರು. ಕು. ಶಾಂತಕುಮಾರ ಸ್ವಾಗತಿಸಿದರು. ಸಮಕುಲಪತಿ ಡಾ.ವಿ.ಡಿ.ಮೈತ್ರಿ ಮತ್ತು ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಪಾಟೀಲ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

1 hour ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago