ಲೋಕಾಯುಕ್ತಕ್ಕೆ ಮರು ಜೀವ ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ದಳ ಸ್ವಾಗತ

0
17

ಕಲಬುರಗಿ: ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದಿನ ಅಧಿಕಾರಗಳನ್ನು ನೀಡಿ ಆದೇಶಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ಸ್ವಾಗತಿಸುತ್ತದೆ ಎಂದು ರಾಜ್ಯಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೆ ಇದ್ದ ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತ ರದ್ದು ಮಾಡಿ ಭ್ರಷ್ಟಾಚಾರ ನಿಗ್ರಹ ದಳ ಅಸ್ತಿತ್ವಕ್ಕೆ ತರಲಾಯಿತು.ಆದರೆ ಎಸಿಬಿ ಸಂಪೂರ್ಣ ಸರ್ಕಾರದ ನೀಯಂತ್ರಣದಲ್ಲಿದ್ದು ಹಲ್ಲು ಕಿತ್ತ ಹಾವಿನಂತೆ ಆಗಿತ್ತು.ಭ್ರಷ್ಟಾಚಾರ ತಡೆಯುವಲ್ಲಿ ವಿಫಲವಾಯಿತು.

Contact Your\'s Advertisement; 9902492681

ಲೋಕಾಯುಕ್ತ ವ್ಯವಸ್ಥೆಯನ್ನು ರದ್ದು ಗೊಳಿಸಿದನ್ನು ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ದಳ ಸರಕಾರದ ವಿರುದ್ಧ ಪ್ರತಿಭಟಿಸಿತು.ಲೋಕಾಯುಕ್ತ ವ್ಯವಸ್ಥೆಯನ್ನು ಮರು ಜಾರಿಗೆ ತರುವಂತೆ ಒತ್ತಾಯಿಸಲಾಗಿತ್ತು.ಈಗ ಲೋಕಾಯುಕ್ತಕ್ಕೆ ಮರು ಜೀವ ಸಿಕ್ಕಿದ್ದು ಬಸವರಾಜ ಬೊಮ್ಮಾಯಿ ಸರಕಾರ ಈಗಲಾದರೂ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಿ ರಾಜ್ಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here