ತಾಯಿ-ಮಗುವಿನ ಅಪೌಷ್ಟಿಕತೆ ನಿವಾರಣೆಗಾಗಿ ಪೋಷಣಾ ಅಭಿಯಾನ ಸಹಕಾರಿ

ಶಹಾಬಾದÀ: ಉತ್ತಮ ವಿಟಮಿನ್‍ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿ ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಿದೆ. ತಾಯಿ-ಮಗುವಿನ ಅಪೌಷ್ಟಿಕತೆ ನಿವಾರಣೆಗಾಗಿ ರಾಷ್ಟ್ರೀಯ ಪೆÇೀಷಣಾ ಅಭಿಯಾನ ನಡೆಯುತ್ತಿದ್ದು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ನಗರಸಭೆಯ ಸದಸ್ಯೆ ಸಾಬೇರಾಬೇಗಂ ಹೇಳಿದರು.

ಅವರು ಪೆÇೀಷಣ ಅಭಿಯಾನ ಯೋಜನೆಯಡಿ ಸೆಪ್ಟೆಂಬರ್ ಮಾಸಾದ್ಯಂತ ಆಚರಿಸುವ ಪೆÇೀಷಣ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಶಹಾಬಾದ ಶಿಶು ಅಭಿವೃದ್ಧಿ ಯೋಜನೆಯ ನಗರದ ಲಕ್ಷ್ಮಿ ಗಂಜ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆ ಮೊಳಕೆ ಕಾಳು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯ ಎಂದರು.

ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಮಾತನಾಡಿ, ಯೋಜನೆಯಲ್ಲಿ ಮುಖ್ಯವಾಗಿ ಗರ್ಭಿಣಿಯರು, ಬಾಣಂತಿಯರು, ಶಿಶುವಿನ ಬೆಳವಣಿಗೆ ಕುಂಠಿತ, ತೂಕ ಕೊರತೆ, ರಕ್ತಹೀನತೆ, ಕಡಿಮೆ ತೂಕದ ಶಿಶು ಸೇರಿದಂತೆ ಅಪೌಷ್ಠಿಕತೆ ಸಮಸ್ಯೆಯಿಂದ ಬಳಲುತ್ತಿರುವವರ ಉತ್ತಮ ಆರೋಗ್ಯಕ್ಕಾಗಿ ಇಲಾಖೆ ನಾನಾ ಯೋಜನೆ ಜಾರಿಗೊಳಿಸಿದ್ದು, ಹಂತ ಹಂತವಾಗಿ ಅಪೌಷ್ಠಿಕತೆ ಮುಕ್ತ ಕರ್ನಾಟಕ ರೂಪಿಸಲು ಸನ್ನದ್ದವಾಗಿದೆ ಎಂದರು.

ಶಹಾಬಾದ ತಾಲ್ಲೂಕು ಸಂಯೋಜಕರಾದ ರೇಖಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೈಕೆಗೆ ಸಂಬಂಧಿಸಿ ಮಾಹಿತಿನಿರಂತರವಾಗಿ ನೀಡಲಾಗುತ್ತಿದೆ. ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರಿಗೂ ಜಾಗೃತಿ ಮೂಡಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅದನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಈ ಅಭಿಯಾನ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯಾದ ಅಮರಜಾ ಮತ್ತು ಅಂಗನವಾಡಿಯ ಎಲ್ಲಾ ಫಲಾನುಭವಿಗಳು ಉಪಸ್ಥಿತರಿದ್ದರು..

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

7 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

7 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

8 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

8 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

8 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420