ಸೆ. 17ಕ್ಕೆ ಕಲಬುರಗಿಗೆ ಸಿಎಂ: ಪೂರ್ವಸಿದ್ಧತಾ ಪರಿಶೀಲಿಸಿದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ

0
65

ಕಲಬುರಗಿ: ಇದೇ ಸೆಪ್ಟೆಂಬರ್ 17 ರಂದು ನಗರದ ಎನ್.ವಿ. ಮೈದಾನದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳಲಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮಂಗಳವಾರ ನಗರದ ಎನ್.ವಿ. ಮೈದಾನಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳ ಪ್ರವೇಶ, ಸಾರ್ವಜನಿಕರ ಪ್ರವೇಶ ಕುರಿತಂತೆ ಸ್ಥಳ ವೀಕ್ಷಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ 180 ವಿವಿಧ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಿದ್ದು, ಅವುಗಳ ಸಿದ್ಧತೆ ವೀಕ್ಷಿಸಿದ ಅವರು ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಮಳಿಗೆಗಳನ್ನು ನಿರ್ಮಿಸುವಂತೆ ನಿರ್ದೇಶನ ನೀಡಿದರು.

Contact Your\'s Advertisement; 9902492681

ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಸೂಕ್ತ ಊಟದ ವ್ಯವಸ್ಥೆ ಮಾಡಬೇಕು. ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಗಣ್ಯರು ಹಾಗೂ ಪತ್ರಕರ್ತರಿಗೆ ಪ್ರತೇಕ ಆಸನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಯಾವುದೇ ಶಿಷ್ಟಾಚಾರ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಮಾರ್ಕೆಟಿಂಗ್ ಕಮ್ಯುನಿಕೇಶನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಎಂ.ಸಿ. ಆಂಡ್ ಎ) ತಂಡದವರು ವೇದಿಕೆ ಹಾಗೂ ಇನ್ನಿತರ ಸಿದ್ಧತೆಗಳ ಕುರಿತು ನೀಲಿ ನಕ್ಷೆ ತೋರಿಸಿ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ದಿ. ಬದೋಲೆ, ಡಿಸಿಪಿ ಅಡ್ಡೂರ ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ದೇವಿದಾಸ್ ಪಾಟೀಲ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಪೊಲೀಸ್ ಆಯುಕ್ತ ದೀಪನ್ ಎಮ್.ಎನ್., ಸಹಾಯಕ ಆಯುಕ್ತ ಮೋನಾ ರೋಟ್, ಟ್ರಾಫಿಕ್ ಇನ್ಸ್‍ಪೆಕ್ಟರ್ ಶಾಂತಿನಾಥ, ತಹಶೀಲ್ದಾರ ಪ್ರಕಾಶ ಕುದರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here