ಕಲಬುರಗಿ: ಕಾರ್ಯತತ್ಪರತೆ, ಬುದ್ಧಿಬಲ, ದುಡಿಮೆ, ಸಮಯ ನಿಷ್ಠೆ, ಶಿಸ್ತುಗಳಿಗೆ ಹೆಸರಾದ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲೊಬ್ಬರಾದ-ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ನವರ ಜಯಂತಿ ಉತ್ಸವವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಎಂ.ಎಸ್.ಕೆ.ಮಿಲ್ ಗೇಟ್ ಹಿಂಬದಿಯಲ್ಲಿರುವ ಎ.ಕೆ.ಆರ್. ದೇವಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸೆ. ೧೫ ರ ಬೆಳಗ್ಗೆ ೧೦.೪೫ ಕ್ಕೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದ ಮಹಾನ್ ಮೇಧಾವಿ ತಂತ್ರಜ್ಞ ಸರ್. ಎಂ.ವಿಶ್ವೇಶ್ವರಯ್ಯ ನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಪರಿಷತ್ತು ನಿರ್ಧರಿಸಿದೆ.
ಸಹಕಾರಿ ಧುರೀಣ ನೀಲಕಂಠರಾವ ಮೂಲಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಉಪನ್ಯಾಸ ನೀಡಲಿದ್ದು, ಕಂಪ್ಯೂಟರ್‌ಗೆ ಕನ್ನಡ ಭಾಷೆ ಕಲಿಸಿದ ಮೇಧಾವಿ ಡಾ.ಬಸವರಾಜ ಎ ಪಾಟೀಲ, ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ನೇತೃತ್ವ ವಹಿಸಲಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…