ಕಲಬುರಗಿ: ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

0
712

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ತಾಲೂಕಿನ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಸಾಮಾನ್ಯ ಮತ್ತು ಮಾದರಿ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಸೆಪ್ಟೆಂಬರ್ 22 ರವರಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಇಲಾಖೆಯ www.bcwd.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2022ರ ಸೆಪ್ಟೆಂಬರ್ 22ರೊಳಗಾಗಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-8050370006 ಹಾಗೂ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here