ಆಲ್ದಾಳ: ಟ್ಯಾಂಕರ್ ನಿರ್ಮಾಣ ಸ್ಥಳ ಸ್ಮಶಾನ ಭೂಮಿ ಒತ್ತುವರಿ ಆರೋಪ

0
15

ಸುರಪುರ:ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿಯಲ್ಲಿ ನಿರ್ಮಿಸುತ್ತಿರುವ ಟ್ಯಾಂಕ್ ನಿರ್ಮಾಣ ಸ್ಥಳ ಸ್ಮಶಾನ ಭೂಮಿ ಒತ್ತುವರಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಕಾಮಗಾರಿ ತಡೆಯುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಸದ್ಯ ಟ್ಯಾಂಕರ್ ನಿರ್ಮಿಸುತ್ತಿರುವ ಸ್ಥಳದಲ್ಲಿ ಸ್ಮಶಾನವಿದ್ದು ಜಾಗ ಒತ್ತುವರಿ ಮಾಡಿ ಕಾಮಗಾರಿ ನಡೆಸುತ್ತಿದ್ದು ಇದರಿಂದ ಗ್ರಾಮದಲ್ಲಿನ ಶವಗಳ ಹೂಳಲು ತೊಂದರೆ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಅಲ್ಲದೆ ಕಾಮಗಾರಿ ನಡೆಸುತ್ತಿರುವ ಸ್ಥಳದಲ್ಲಿ ಹೂಳಲಾಗಿದ್ದ ಶವವೊಂದು ಹೊರಬಿದ್ದಿದ್ದು ಕಳೆದ ನಾಲ್ಕು ದಿನಗಳಿಂದ ಶವ ಹಾಗೇ ಹೊರಬಿದ್ದಿದ್ದು ಜನರಲ್ಲಿ ಭಯ ಹುಟ್ಟಿಸುತ್ತಿದೆ,ಗ್ರಾಮದಲ್ಲಿ ಸ್ಮಶಾನಕ್ಕೆ ಸ್ಥಳವಿಲ್ಲದೆ ಇರುವ ಅಲ್ಪಸ್ವಲ್ಪ ಜಾಗದಲ್ಲಿ ಶವಗಳನ್ನು ಹೂಳಲಾಗುತ್ತಿದ್ದು ಈಗ ಟ್ಯಾಂಕರ್ ನಿರ್ಮಾಣದಿಂದ ಇರುವ ಜಾಗವೂ ಇಲ್ಲದಂತಾಗಿ ಮುಂದೆ ಗ್ರಾಮದ ಜನರು ಶವ ಸಂಸ್ಕಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ.ಇದಕ್ಕೆ ತಾಜಾ ಉದಾಹರಣೆ ಎಂದರೆ ಈಗ ಶವ ಹೊರಬಿದ್ದಿರುವುದು ಸಾಕ್ಷಿಯಾಗಿದೆ.

Contact Your\'s Advertisement; 9902492681

ಆದ್ದರಿಂದ ಕೂಡಲೇ ಈಗ ನಡೆಯುತ್ತಿರುವ ಕಾಮಗಾರಿಯನ್ನು ತಡೆದು ಬೇರಕಡೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಗ್ರಾಮಸ್ಥರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ನಂತರ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹಣಮಂತಪ್ಪ ಅಂಬಲಿಯವರಿಗೂ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಸೋಮು ಕಟ್ಟಿಮನಿ,ಹಣಮಂತ ಕಟ್ಟಿಮನಿ,ಹುಲಗಪ್ಪ ಕಟ್ಟಿಮನಿ,ಲಕ್ಷ್ಮಣ ಕಟ್ಟಿಮನಿ,ಭಾಗಪ್ಪ ಕಟ್ಟಿಮನಿ,ರತ್ನಪ್ಪ ಕಟ್ಟಿಮನಿ,ಮಲ್ಲಪ್ಪ ಕಟ್ಟಿಮನಿ,ಹಣಮಂತ ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here