ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕಲ್ಯಾಣದ ಕಲ್ಯಾಣಕ್ಕೆ ದಿಟ್ಟತನದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲು ಕಲ್ಯಾಣ ಕರ್ನಾಟಕದ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಹೋರಾಟಗಾರರಾದ ಲಕ್ಷ್ಮಣ ದಸ್ತಿ ಒತ್ತಾಯಿಸಿದರು.
ಡಾ.ಬಿ.ಆರ್ ಅಂಬೇಡ್ಕರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕದಲ್ಲಿ ವಿಮೋಚನಾ ಚಳುವಳಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ್ನಾಡಿದ ಅವರು 371ನೇ ಜೇ ಕಲಂ ತಿದ್ದುಪಡಿ ಪಡೆದ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು ಸಂವಿಧಾನ 371j ಕಲಂ ತಿದ್ದುಪಡಿಯ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಮಂತ್ರಾಲಯ ಸ್ಥಾಪನೆ ಸೇರಿದಂತೆ ನೆನಗುದಿಗೆ ಬಿದ್ದಿರುವ ಕಲ್ಯಾಣದ ಬೇಡಿಕೆಗಳು ಈಡೇಸಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದರು..
ಕಲ್ಯಾಣ ಕರ್ನಾಟಕದಲ್ಲಿ ವಿಮೋಚನಾ ಚಳುವಳಿಯ ಗಂಭೀರತೆಯ ಬಗ್ಗೆ ಮತ್ತು ಸರದಾರ ಪಟೇಲರ ದಿಟ್ಟತನದಿಂದ ಹೈದ್ರಾಬಾದ ನಿಜಾಮ ರಾಜ್ಯ ಅಖಂಡ ಭಾರತದಲ್ಲಿ ವಿಲೀನವಾದ ವಿಷಯದ ಕುರಿತು ವಿವರವಾಗಿ ವಿಷಯ ಮಂಡಿಸಿರುವ ಅವರು ಕಲ್ಯಾಣದ ಕಲ್ಯಾಣಕ್ಕೆ ಸರ್ಕಾರ ವಿಶೇಷವಾಗಿ ಪರಿಗಣಿಸಲು ಅಗ್ರಹಿಸಿದರು.
ಸಬೆಯ ಅಧ್ಯಕ್ಷತೆವಹಿಸಿ ಮಾತ್ನಾಡಿದ ಶಾಂತಪ್ಪ ಸೂರನ್ ರವರು ಪ್ರಸ್ತುತ ಕಲ್ಯಾಣದ ಕಲ್ಯಾಣಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯಕುಮಾರ ಡಿ ರವರು ಸ್ವಾಗತ ಕೋರಿದರು ಡಾ.ಗಾಂಧೀಜಿ ಮೋಳಕೇರೆರವರು ಸಭೆಗೆ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…