ಬಿಸಿ ಬಿಸಿ ಸುದ್ದಿ

ಕವಡಿಮಟ್ಟಿ:ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಗತಿ ಪರಿಶೀಲನಾ ಸಭೆ

ಸುರಪುರ: ಕೃಷಿ ವಿಜ್ಞಾನ ಕೇಂದ್ರ ಕವಡಿಮಟ್ಟಿಯ ಸಭಾಂಗಣದಲ್ಲಿ ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಕೆ. ಎನ್. ಕಟ್ಟಿಮನಿ ಇವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳನ್ನೊಳಗೊಂಡಂತೆ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳು, ಕೃಷಿ ಮಹಾವಿದ್ಯಾಲಯಗಳು ಹಾಗೂ ಕೃಷಿ ಸಂಶೋಧನಾ ಕೇಂದ್ರಗಳ ಮುಖ್ಯಸ್ಥರುಗಳೊಂದಿಗೆ ಸಭೆಯನ್ನು ಆಯೋಜಿಸಿ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆಗಳಿಗೆ ಉಂಟಾದ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ಕುಲಪತಿಗಳು ಸಭೆಯಲ್ಲಿ ಮಾತನಾಡಿ, ಕಳೆದ ಕೆಲ ವಾರಗಳಿಂದ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸರಾಸರಿಗಿಂತಲೂ ಹೆಚ್ಚು ಮಳೆಯಾಗಿದೆ. ಅತಿಯಾದ ಮಳೆಯಿಂದಾಗಿ ಬೆಳೆಗಳ ಬೆಳವಣೆಗೆಯೂ ಕುಂಠಿತಗೊಳ್ಳುವದಲ್ಲದೆ, ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮಥ್ರ್ಯ ಕಡಿಮೆಯಾಗುವುದು.

ಇಂತಹ ಸಂದರ್ಭಗಳಲ್ಲಿ ಮಣ್ಣಿನಲ್ಲಿ ಹೆಚ್ಚಾಗಿರುವ ನೀರನ್ನು ಬಸಿದು ತೆಗೆದು, ಭೂಮಿಯನ್ನು ಶಾಶ್ವತವಾಗಿ ಸುಧಾರಿಸಬೇಕೆಂದರೆ, ದೀರ್ಘ ಕಾಲದ ಹೊಲದ ಸುತ್ತ ಬಸಿಗಾಲುವೆಗಳನ್ನು ತೆಗೆಯಬಹುದಾಗಿದ್ದು, ಬೆಳೆಯು ಸಂಪೂರ್ಣ ಹಾಳಾಗಿದ್ದರೆ ಕಡಲೆ, ಹಿಂಗಾರಿ ಜೋಳ, ನವಣೆ, ಕುಸುಬೆ, ಬೆಳೆಗಳನ್ನು ಪರ್ಯಾಯ ಬೆಳೆಯಾಗಿ ತೆಗೆದುಕೊಳ್ಳಬಹುದೆಂದು ಸಲಹೆ ನೀಡಿದರು.

ಈಗಾಗಲೇ ವಿವಿಧ ಬೆಳವಣಿಗೆ ಹಂತದಲ್ಲಿರುವ ಮುಂಗಾರು ಬೆಳೆಗಳಿಗೆ ಸಾಕಷ್ಟು ಹಾನಿಯಾಗುತ್ತಿದ್ದು, ರೈತರು ಅತಿವೃಷ್ಠಿಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು, ಕೃಷಿ ಸಲಹೆಗಳನ್ನು ಗ್ರಾಮೀಣ ಮಟ್ಟದಲ್ಲಿ ವಿವಿಧ ವಿಸ್ತರಣಾ ಚಟುವಟಿಕೆಗಳ ಮುಖಾಂತರ ತಲುಪಿಸಲು ವಿಶ್ವವಿದ್ಯಾಲಯದ ಪ್ರತಿ ವಿಜ್ಞಾನಿಗಳು, ಸಹಾಯಕ ಪ್ರಾಧ್ಯಾಪಕರುಗಳು, ವಿಷಯ ತಜ್ಞರುಗಳು ಇನ್ನೂ ಹೆಚ್ಚಿನದಾಗಿ ಶ್ರಮಿಸಬೇಕೆಂದು ಸೂಚಿಸಿದರು. ಕಲ್ಯಾಣ ಕರ್ನಾಟಕದ ಭಾಗದ ರೈತರಿಗೆ ಕೃಷಿ ಮಾಹಿತಿಯನ್ನು ನೀಡಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ಒಳಗೊಂಡ ವಿಜ್ಞಾನಿಗಳ ಸಮಿತಿಯು ರೈತರ ಕ್ಷೇತ್ರಗಳಿಗೆ ಭೇಟಿ, ನೀಡಿ ಸೂಕ್ತ ಕೃಷಿ ಮಾಹಿತಿಯನ್ನು ಒದಗಿಸಿ, ರೈತರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕೆಂದು ವಿಜ್ಞಾನಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಾ. ಎಮ್. ಜಿ. ಪಾಟೀಲ್, ಶಿಕ್ಷಣ ನಿರ್ದೇಶಕರು, ಡಾ. ಬಿ. ಕೆ. ದೇಸಾಯಿ, ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು, ವಿಶ್ವವಿದ್ಯಾಲಯದ ಅಧಿಕಾರಿಗಳು, ವಿವಿಧ ಕೇಂದ್ರಗಳ ಮುಖ್ಯಸ್ಥರುಗಳು, ವಿಜ್ಞಾನಿಗಳು ಭೌತಿಕ ಮತ್ತು ಆನ್-ಲೈನ್ ಮುಖಾಂತರ ಸದರಿ ಸಭೆಯಲ್ಲಿ ಹಾಜರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago